ಜನ ಮನದ ನಾಡಿ ಮಿಡಿತ

Advertisement

ಕೃಷಿ ನಾಶವಾಗಿದ್ದರಿಂದ ಆತ್ಮಹತ್ಯೆಗೆ ಶರಣಾದ ಕೃಷಿಕ; ಮಿತ್ರಂಪಾಡಿ ನಿವಾಸಿ ಭಾಸ್ಕರ್ ರೈ ಆತ್ಮ*ಹತ್ಯೆ

ಬಂಟ್ವಾಳ: ನೀರಿನ‌ ಸಮಸ್ಯೆಯಿಂದ ಕೃಷಿ ನಾಶವಾಗಿದ್ದು, ಮನನೊಂದ ಕೃಷಿಕನೋರ್ವ ಕುಡಿಯಲು ನೀರು ಸೇದುವ ಬಾವಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾವಿನ ವೇಳೆ ನಡೆದಿದೆ.

ಪುತ್ತೂರು ಕೆದಂಬಾಡಿ ಗ್ರಾಮದ ಮಿತ್ರಂಪಾಡಿ ನಿವಾಸಿ ಭಾಸ್ಕರ್ ರೈ ( 53) ಆತ್ಮಹತ್ಯೆ ಮಾಡಿದ ವ್ಯಕ್ತಿ.
ಭಾಸ್ಕರ್ ರೈ ಅವರು ಪುದು ಗ್ರಾಮದ ಪೆಲಪಾಡಿ ಎಂಬಲ್ಲಿ ಪತ್ನಿಯ ತಮ್ಮನ ಮನೆಯ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು*….
ಭಾಸ್ಕರ್ ರೈ ಅವರು ಪುತ್ತೂರಿನ ಕೆದಂಬಾಡಿ ಗ್ರಾಮದಲ್ಲಿ ವಾಸವಾಗಿದ್ದು, ಬಂಟ್ವಾಳ ತಾಲೂಕಿನ ಪುದು ಗ್ರಾಮದ ಪೆಲಪಾಡಿಯಿಂದ ಮದುವೆಯಾಗಿದ್ದರು‌.
ಕೃಷಿಯನ್ನು ನಂಬಿ ಬದುಕುತ್ತಿದ್ದ ಇವರಿಗೆ ಇತ್ತೀಚಿನ ದಿನಗಳಲ್ಲಿ ಕೃಷಿಗೆ ನೀರಿನ ಸಮಸ್ಯೆ ಉಂಟಾಗಿ,ಕೃಷಿಗೆ ಹಾನಿಯಾಗಿತ್ತು.
ಕೃಷಿಯೇ ಮೂಲಾಧಾರವಾಗಿದ್ದ ಇವರಿಗೆ ನೀರಿನ ಸಮಸ್ಯೆಯಿಂದ ಕೃಷಿ ಹಾಳಾದ ಕಾರಣ ಮನನೊಂದಿದ್ದರು.
ಇದರಿಂದ ನಿದ್ರಾಹೀನತೆಗೆ ಒಳಗಾಗಿದ್ದರು.
ಇದೇ ಕಾರಣದಿಂದ ಪತ್ನಿಯ ತಮ್ಮನ ಮನೆ ಪುದುವಿಗೆ ಬಂದಿದ್ದರು. ಅಲ್ಲಿಂದ ನಿದ್ರಾಹೀನತೆ ಸಮಸ್ಯೆಗೆ ಪರಿಹಾರಕ್ಕಾಗಿ ಮಂಗಳೂರಿನ ವೈದ್ಯರ ಬಳಿಗೆ ಚಿಕಿತ್ಸೆಗೆ ತೆರಳಿ ವಾಪಾಸು ಬಾವನ ಮನೆಯಲ್ಲಿ ಉಳಿದುಕೊಂಡಿದ್ದರು.
ರಾತ್ರಿ ಊಟ ಮಾಡಿ ಹಾಲ್ ನಲ್ಲಿ ಮಲಗಿದ್ದು, ಮಧ್ಯ ರಾತ್ರಿ ಇವರು ಮಲಗಿದ್ದಲ್ಲಿ ಇಲ್ಲದೆ ಕಾಣೆಯಾಗಿದ್ದು ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ಬಾವಿಯಲ್ಲಿ ನೀರು ಎಳೆಯಲು ಹಾಕಿರುವ ರಾಟೆಯ ಕಬ್ಬಿಣದ ಕೊಂಡಿಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಮ್ಮಶುಭಕರ ರೈ ದೂರಿನಲ್ಲಿ ತಿಳಿಸಿದ್ದಾರೆ.
ಕೃಷಿ ಹಾನಿಯ ಬಗ್ಗೆ ಚಿಂತೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!