ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಸೆರೆ

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 270 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ದೇರಳಕಟ್ಟೆಯ ಪರಿಸರದಲ್ಲಿ ಆ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ ಮೊಹಮ್ಮದ್ ಅಮೀನ್ ರಾಫಿ(23), ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಮೊಹಮ್ಮದ್ ನೌಮಾನ್(22), ಮತ್ತು ಮೊಹಮ್ಮದ್ ಸಫೀಲ್ ಎಂಬವರನ್ನು ವಶಕ್ಕೆ ಪಡೆದುಕೊಂಡು 6,50,000/- ರೂ ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500/-. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ  ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು  ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.  ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ಎಂಬಾತನ ವಿರುದ್ಧ ಈ ಹಿಂದೆ  2021 ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. 

ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!