ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಲಕದ ಕೆರೆ ಬಳಿಯ ಗುಡ್ಡೆಯಿಂದ ಟಿಪ್ಪರ್ ಮೂಲಕ ಮಣ್ಣು ಸಾಗಾಟ ಅಕ್ರಮವಾಗಿ ನಡೆಯುತ್ತಿದ್ದು ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಪ್ಪರ್ ಗಳಲ್ಲಿ ಎರ್ರಾಬಿರ್ರಿ ಯಾಗಿ ಕೆರೆಕಾಡು-ಜಲಕದಕೆರೆ-ತೋಕೂರು ದೇವಸ್ಥಾನ ಸಂಪರ್ಕ ರಸ್ತೆಯಲ್ಲಿ ಮಣ್ಣು ಸಾಗಾಟ ನಡೆಯುತ್ತಿದ್ದು ಗ್ರಾಮೀಣ ಭಾಗದ ಕಾಂಕ್ರೀಟ್ ರಸ್ತೆ ಕೆಸರುಮಯವಾಗಿ ಸಂಚಾರ ದುಸ್ತರವಾಗಿ ಪರಿಣಮಿಸಿದೆ.
ನೀತಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಮಣ್ಣು ಸಾಗಾಟದಿಂದ ಕಾಂಕ್ರೀಟ್ ರಸ್ತೆಯ ಇಕ್ಕೆಲ ಚರಂಡಿಗಳು ನಾಶವಾಗಿದ್ದು ಗ್ರಾಮೀಣ ಭಾಗದ ರಸ್ತೆ ಕೂಡ ವಿನಾಶದ ಅಂಚಿನಲ್ಲಿದೆ.
ಕೂಡಲೇ ಮುಲ್ಕಿ ತಹಶೀಲ್ದಾರ್ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ



