ಜನ ಮನದ ನಾಡಿ ಮಿಡಿತ

Advertisement

ನೇಪಾಳ ಮೂಲದ ಅಪ್ರಾಪ್ತೆ ಆತ್ಮಹತ್ಯೆ

ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.
ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.


ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ರೀಟಾ ಡಿ ಸೋಜ ಎಂಬವರ ಮನೆಯಲ್ಲಿ ಬಾಡಿಗೆಗೆ ನೆಲೆಸಿದ್ದರು.
ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು,ಆಕೆಯನ್ನು ಮಂಗಳೂರಿನಲ್ಲೆ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು.ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸುವುದಾಗಿ ಹಠ ಹಿಡಿದಿದ್ದು ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ.


ಮದ್ಯಾಹ್ನ ರಬೀನಳ ತಾಯಿ‌ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರಕೊಂಡು ಹೋಗಿದ್ದ ವೇಳೆ ರಬೀನ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಮೃತ ರಬೀನ ತಂದೆ,ತಾಯಿ,ಇಬ್ಬರು ಸಹೋದರಿಯರು ,ಓರ್ವ ಸಹೋದರನನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!