ಜನ ಮನದ ನಾಡಿ ಮಿಡಿತ

Advertisement

ಜನ್ಸಾಲೆಯಲ್ಲಿ ಬಾಲಕನ ಮೇಲೆ ಹಲ್ಲೆ: ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ

ಉಡುಪಿ: ಜನ್ಸಾಲೆಯ 13 ವರ್ಷದ ಚಿಕ್ಕ ಬಾಲಕನ ಹಲ್ಲೆ ನಡೆಸಿದ ಆರೋಪಿಯನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿ ವಿಶ್ವಕರ್ಮ ಸಮಾಜ ಸೇವಾ ಸಂಘಟನೆಯ ನೇತೃತ್ವದಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಜನ್ಸಾಲೆ ಹೆಗ್ಗೇರಿಯ ಶಾಂತಾರಾಮ ಶೆಟ್ಟಿ ನಾರುಮಕ್ಕಿ ಎಂಬಾತ ಪ್ರಥ್ವಿ ಎನ್ನುವ ಬಾಲಕ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ, ಈ ಕುರಿತು ಬಾಲಕನ ಪೋಷಕರು ಈ ಹಿಂದೆ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಾಗಿ ವಾರ ಕಳೆದರು ಇದುವರೆಗೂ ಯಾವುದೇ ಪೊಲೀಸ್‌ ತನಿಖೆ ನಡೆಸದ ಹಿನ್ನಲೆಯಲ್ಲಿ ಇಂದು ಸಂಘಟನೆಯ ವತಿಯಿಂದ, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ದೂರು ನೀಡಲಾಯಿತು. ಈ ಕುರಿತು ಠಾಣಾ ಸಬ್ ಇನ್ಸ್ಪೆಕ್ಟರ್ ನಾಸೀರ್ ಹುಸೇನ್ ಮಾತನಾಡಿ, ಆರೋಪಿಯ ಪತ್ತೆಗೆ ಶ್ರಮಿಸುತ್ತಿದ್ದು ಆತ ಮೊಬೈಲ್ ನ್ನು ಮನೆಯಲ್ಲೇ ಇಟ್ಟು ತಪ್ಪಿಸಿಕೊಂಡಿದ್ದಾನೆ. ಪತ್ತೆಗೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!