ಒಂದು ತಿಂಗಳ ಕ್ರಿಕೆಟ್ ಹಬ್ಬಕ್ಕೆ ರೋಚಕ ತೆರೆಬಿದ್ದಿದೆ. ಟಿ20 ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನ ಬಗ್ಗುಬಡಿದು 13 ವರ್ಷಗಳ ಬಳಿಕ ಐಸಿಸಿ ವಿಶ್ವಕಪ್ ಹಾಗೂ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿದೆ. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನ ತೋರಿದ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ.




