ಜನ ಮನದ ನಾಡಿ ಮಿಡಿತ

Advertisement

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ

ಮುಲ್ಕಿ: ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿ ಮಾತನಾಡಿ ಎಳೆಯ ಮಕ್ಕಳನ್ನು ಉತ್ತಮವಾಗಿ ಬೆಳೆಸುವ ಶಿಕ್ಷಕ ವೃತ್ತಿಯು ಶ್ರೇಷ್ಠವಾಗಿದ್ದು ಸಮಾಜದಲ್ಲಿ ಶಿಕ್ಷಣ ಕ್ಷೇತ್ರದ ಸಾಧಕರನ್ನು ಗೌರವಿಸುವ ಕಾರ್ಯ ಅಭಿನಂದನೀಯ ಎಂದರು ಎಂದರು.


ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಮೊಗವೀರ ಮಾಸಪತ್ರಿಕೆ ಸಂಪಾದಕ ಅಶೋಕ್ ಸುವರ್ಣ,ಕಿಲ್ಪಾಡಿ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದ ಅಧ್ಯಕ್ಷ ಕೆ.ನರಸಿಂಹ ಪೈ
ನಿವೃತ್ತ ಪ್ರಾಂಶುಪಾಲ ಸ್ಯಾಮ್ ಮಾಬೆನ್, ವೈ ಎನ್ ಸಾಲ್ಯಾನ್, ಪಿಕೆ ಸದಾನಂದ, ಹೊಸ ಅಂಗಣದ ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಜೆ.ಸಿ ದಿನೇಶ್ ಶೆಟ್ಟಿ, ರವಿಚಂದ್ರ ರಾವ್, ವಾಮನ್ ಕೋಟ್ಯಾನ್ ನಡಿಕುದ್ರು, ಜಯಪಾಲ ಶೆಟ್ಟಿ ಐಕಳ, ಬಂಕಿನಾಯಕರು, ಸರೋಜಿನಿ ಸುವರ್ಣ, ಸಾಧು ಅಂಚನ್, ದಿನೇಶ್ ಕೊಲ್ನಾಡು, ವಕೀಲ ರವೀಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಕಿಲ್ಪಾಡಿ ವ್ಯಾಸ ಮಹರ್ಷಿ ವಿದ್ಯಾಪೀಠದ ನಿವೃತ್ತ ಪ್ರಾಂಶುಪಾಲರಾದ ಚಂದ್ರಿಕಾ ಭಂಡಾರಿ ರವರನ್ನು ಸನ್ಮಾನಿಸಲಾಯಿತು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತ ಡಾ ಹರೀಶ್ಚಂದ್ರ ಪಿ ಸಾಲ್ಯಾನ್ ರವರನ್ನು ಗೌರವಿಸಲಾಯಿತು ಹಾಗೂ ಇತ್ತೀಚೆಗೆ ನಿಧನರಾದ ಮುಲ್ಕಿಯ ಪ್ರಸಿದ್ಧ ಪಂಡಿತರಾದ ಡಾ. ಬಿ ಎಚ್ ರಾಘವ ರಾವ್ ರವರಿಗೆ ನುಡಿ ನಮನಗಳನ್ನು ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!