ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಾ.ಫ.ಗು.ಹಳಕಟ್ಟಿಯವರ ಜನ್ಮ ದಿನದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಇಲಾಖೆಯ ನಿರ್ದೇಶಕಿ ಧರಣೀದೇವಿ ಮಾಲಗತ್ತಿ , ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಗರಾಜಮೂರ್ತಿ ಸೇರಿ ಹಲವರು ಉಪಸ್ಥಿತರಿದ್ದರು.



