ಜನ ಮನದ ನಾಡಿ ಮಿಡಿತ

Advertisement

ಮಂಗಳೂರು:ರಿಟೈನಿಂಗ್‌ ವಾಲ್‌ ವಿಳಂಬ: ಆತಂಕದಲ್ಲಿ ರಾಮಕೃಷ್ಣ ಶಿಕ್ಷಣ ಸಂಸ್ಥೆ

ಮಂಗಳೂರು: ಬಂಟ್ಸ್ ಹಾಸ್ಟೆಲ್‌ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಕಟ್ಟಡದ ಬಳಿ ಭಂಡಾರಿ ಬಿಲ‌್ಡರ್ಸ್ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡದಿಂದ ನಮ್ಮ ಸಂಸ್ಥೆಯ ಕಟ್ಟಡಕ್ಕೆ ಆತಂಕ ಎದುರಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘವು ಜಿಲ್ಲಾಧಿಕಾರಿ ಮತ್ತು ಮೇಯರ್‌ಗೆ ದೂರು ನೀಡಿದೆ.

ಶತಮಾನದ ಹಿಂದೆಯೇ ಇಲ್ಲಿ ಪ್ರಾಕೃತಿಕವಾಗಿ ನೀರು ಹರಿಯುವ ಸಣ್ಣ ತೋಡಿನ ರೂಪದ ಚರಂಡಿ ಇದ್ದು, ಭಂಡಾರಿ ಬಿಲ್ಡಸ್೯ ಸಂಸ್ಥೆ ನಿರ್ಮಾಣ ಮಾಡುವ ಕಟ್ಟಡದಿಂದ ಚರಂಡಿಗೆ ಹಾನಿಯಾಗಿದೆ. ಅಲ್ಲದೆ ಕಟ್ಟಡಕ್ಕಾಗಿ ತುಂಬಾ ಆಳದಲ್ಲಿ ಭೂಮಿಯನ್ನು ಅಗೆಯಲಾಗಿದ್ದು, ಸುರಕ್ಷೆಗಾಗಿ ನಿರ್ಮಿಸುತ್ತಿರುವ ರಿಟೈನಿಂಗ್‌ ವಾಲ್‌ ಕಾಮಗಾರಿ ತುಂಬಾ ನಿಧಾನಗತಿಯಲ್ಲಿದೆ ಎಂದು ಅದರಲ್ಲಿ ಆಪಾದಿಸಲಾಗಿದೆ. ಕೆಲವು ವರ್ಷಗಳ ಹಿಂದೆ ಕಾಮಗಾರಿ ಆರಂಭಿಸುವಾಗ ಭಂಡಾರಿ ಬಿಲ್ಡಸ್೯ ‌ನ ಮುಖ್ಯಸ್ಥರಾದ ಲಕ್ಷ್ಮೀಶ ಭಂಡಾರಿ ಅವರು ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದಾಗಿಯೂ, ರಿಟೈನಿಂಗ್‌ ವಾಲ್‌ ಕಾಮಗಾರಿ ಪೂರ್ತಿಯಾಗುವವರೆಗೆ ಪೈಪ್‌ ಅಳವಡಿಸಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದಾಗಿಯೂ ಭರವಸೆ ನೀಡಿದ್ದರು. ರಿಟೈನಿಂಗ್‌ ವಾಲ್‌ ಕಾಮಗಾರಿ ಪೂರ್ತಿಯಾದ ಬಳಿಕ ಹಿಂದಿದ್ದ ರೀತಿಯಲ್ಲೇ ಚರಂಡಿ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದ್ದರು. ಆದರೆ ಆ ಬಳಿಕ ಅವರು ಮಾತಿಗೆ ಬದ್ಧರಾಗಿರದ ಕಾರಣ ಈಗ ರಾಮಕೃಷ್ಣ ಶಿಕ್ಷಣ ಸಂಸ್ಥೆಗೆ ಅಪಾಯದ ಆತಂಕ ಎದುರಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈಗ ಮುಂಗಾರು ಬಿರುಸುಗೊಂಡಿದ್ದು, ರಿಟೈನಿಂಗ್‌ ವಾಲ್‌ ಕಾಮಗಾರಿ ಪೂರ್ತಿಯಾಗದ ಕಾರಣ ಮಣ್ಣು ಸಡಿಲಗೊಂಡು ಜರಿದು ಬೀಳುವ ಸಾಧ್ಯತೆಯೂ ಇದೆ. ಒಂದೊಮ್ಮೆ ಹೀಗಾದರೆ ಕಾಲೇಜಿನ ಕಟ್ಟಡ ಹಾಗೂ ಅದರಲ್ಲಿರುವ ಸಾವಿರಾರು ವಿದ್ಯಾರ್ಥಿಗಳ ಜೀವ ಅಪಾಯಕ್ಕೆ ಸಿಲುಕಲಿದೆ. ಆದ್ದರಿಂದ ಕೂಡಲೇ ತಾವು ಮಧ್ಯಪ್ರವೇಶಿಸಿ ಭಂಡಾರಿ ಬಿಲ್ಡರ್ಸ್‌ ಸಂಸ್ಥೆಯಿಂದ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮತ್ತು ಮೇಯರ್ ಗೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಮೇ ತಿಂಗಳ 27ರಂದು ಈ ಸಂಬಂಧ ಭಂಡಾರಿ ಬಿಲ್ಡರ್ಸ್‌ನ ಮಾಲಕರಾದ ಲಕ್ಷ್ಮೀಶ ಭಂಡಾರಿಗೆ ಈ ಸಂಬಂಧ ನೋಟಿಸ್‌ ನೀಡಿ, ಅಗತ್ಯ ಸುರಕ್ಷಾ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿತ್ತು. ಹಿಂದೆ ನೀಡಿದ್ದ ಮಾತು ಉಳಿಸಿಕೊಳ್ಳುವಂತೆ ಕೇಳಿಕೊಳ್ಳಲಾಗಿತ್ತು. ಆದರೆ ಅದಕ್ಕೆ ಯಾವುದೇ ಪೂರಕ ಸ್ಪಂದನೆ ಸಿಗದ ಕಾರಣ ಜೂನ್‌ 27ರಂದು ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಮುಖ್ಯಸ್ಥರಿಗೆ ಬಂಟರ ಸಂಘದ ವತಿಯಿಂದ ದೂರು ನೀಡಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!