ಜನ ಮನದ ನಾಡಿ ಮಿಡಿತ

Advertisement

ಕಾಪುವಿನಲ್ಲಿ ಮೋರಿಯ ದಂಡೆಗೆ ಡಿಕ್ಕಿಯಾಗಿ ಕಾರು ಪಲ್ಟಿ: ಅಪಾಯದಿಂದ ಪಾರಾದ ಚಾಲಕ


ಉಡುಪಿ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.


ಚಾಲಕ‌ ನಿದ್ದೆಯ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಏಕಾಏಕಿಯಾಗಿ ರಸ್ತೆಯ ಬದಿಯ ಮೋರಿಯ ದಂಡೆಗೆ ಬಡಿದಿದೆ. ಚಾಲಕ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಬಿಟ್ಟು, ಮರಳಿ ಉಡುಪಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ದಂಡೆಗೆ ಬಡಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಬಂದ ಹೆಜಮಾಡಿ ಟೋಲ್ ಸಿಬ್ಬಂದಿ ಹಾಗೂ ಪೊಲೀಸರು ಹೆದ್ದಾರಿಗೆ ಅಡ್ಡವಾಗಿ ಉರುಳಿಬಿದ್ದ ಕಾರನ್ನು ಯಂತ್ರದ ಮೂಲಕ ತೆರವುಗಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!