ಪತಿಯೋರ್ವ ತಾಳಿ ಕಟ್ಟಿದ ಪತ್ನಿಯನ್ನೇ ಗುಂಡಿಟ್ಟು ಕೊಂದ ಘಟನೆ ವಿರಾಜಪೇಟೆ ತಾಲ್ಲೂಕಿನಲ್ಲಿ ನಡೆದಿದೆ.

ಬೆಟೋಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು,ಶಿಲ್ಪ ಹತ್ಯೆಯಾದ ಮಹಿಳೆಯಾಗಿದ್ದಾಳೆ. ಪತಿ ಬೋಪಣ್ಣನ ಕೈಯಾರೆ ಶಿಲ್ಪ ಸಾವನ್ನಪ್ಪಿದ್ದು, ಮನೆಯಲ್ಲಿ ಜಗಳವಾಡಿಕೊಂಡು ಹತ್ಯೆ ಮಾಡಿದ್ದಾನೆ.

ಬಳಿಕ ಪತಿ ಬೋಪಣ್ಣ ಕೋವಿಯೊಂದಿಗೆ ಪೊಲೀಸರಿಗೆ ಶರಣಾಗಿದ್ದು, ಇನ್ನು ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



