ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಆ.10ರಂದು ಜರಗಲಿರುವ “ಆಟಿಡೊಂಜಿ ಬಂಟೆರೆ ಸೇರಿಗೆ” ಕಾರ್ಯಕ್ರಮಗಳಿಗೆ ಅಧ್ಯಕ್ಷರಾದ ಹೇಮನಾಥ್ ಶೆಟ್ಟಿ ಕಾವು ಮತ್ತು ದುರ್ಗಾಪ್ರಸಾದ್ ರೈ ಕುಂಬ್ರ ಹಾಗೂ ರವಿ ಪ್ರಸಾದ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರನ್ನು ಗೌರವಪೂರ್ವಕವಾಗಿ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಗುರುಪುರ ಬಂಟರ ಸಂಘದ ಸುದರ್ಶನ್ ಶೆಟ್ಟಿ, ಬಜ್ಪೆ ವಲಯ ಬಂಟರ ಸಂಘದ ಶ್ರೀ ಹರೀಶ್ ಶೆಟ್ಟಿ, ಸುಕೇಶ್ ಶೆಟ್ಟಿ, ದಿನೇಶ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ ಸತ್ಯಪ್ರಸಾದ್ ಶೆಟ್ಟಿ, ಬಂಟರ ಸಂಘ ನೀರುಮಾರ್ಗ ವಲಯದ ಗೋಕುಲ್ ದಾಸ್ ಶೆಟ್ಟಿ, ಬಂಟರ ಸಂಘ ಕೊಟ್ಟಾರ ಕೋಡಿಕಲ್ ನ ಲಕ್ಷಣ್ ಶೆಟ್ಟಿ, ಉಮೇಶ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಮತ್ತು ಆಹ್ವಾನಿತ ಸದಸ್ಯರಾದಯಶು ಪಕ್ಕಳ ಇವರುಗಳು ಉಪಸ್ಥಿತರಿದ್ದರು.



