ಜನ ಮನದ ನಾಡಿ ಮಿಡಿತ

Advertisement

ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಜಾರಿದ ದ್ವಿಚಕ್ರ ವಾಹನ; ಪಟ್ಟಣಕ್ಕೆ ಹೊರಟಿದ್ದ ಇಬ್ಬರು ನೀರುಪಾಲು!

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಇಬ್ಬರು ಸಂಬಂಧಿಕರು ಕೊಚ್ಚಿ ಹೋಗಿರುವ ಘಟನೆ ಮೂಡಲಗಿ ತಾಲೂಕಿನ ಅವರಾದಿ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ಬಿದ್ದಿದ್ದು, ಅವರಾದಿ ಗ್ರಾಮದ ಚನ್ನಪ್ಪ ಹರಿಜನ(30), ದುರ್ಗವ್ವ ಹರಿಜನ(25) ಕೊಚ್ಚಿಹೋದ ಸಂಬಂಧಿಗಳು ಎಂದು ಗುರುತಿಸಲಾಗಿದೆ.
ಇಬ್ಬರು ವ್ಯಕ್ತಿಗಳು ಅವರಾದಿ ಗ್ರಾಮದಿಂದ ಮಹಾಲಿಂಗಪುರ ಪಟ್ಟಣಕ್ಕೆ ಪ್ರಯಾಣ ಬೆಳೆಸಿದ್ದರು. ಆದರೆ, ಅವರ ಪ್ರಯಾಣದ ವೇಳೆ ಸೇತುವೆ ಮೇಲೆ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಉರುಳಿದೆ.‌ ಬ್ರಿಡ್ಜ್ ಬಳಿ ಬೈಕ್ ಪತ್ತೆಯಾಗಿದ್ದು, ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿರುವ ಹಿನ್ನೆಲೆ ಘಟಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಹರಿವಾಗಿದ್ದು, ಸ್ಥಳಕ್ಕೆ ಎಸ್​ಡಿಆರ್​ಎಫ್ ‌ಹಾಗೂ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ನದಿಯಲ್ಲಿ ಕೊಚ್ಚಿ ಹೋಗಿರುವ ಇಬ್ಬರಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!