ಜನ ಮನದ ನಾಡಿ ಮಿಡಿತ

Advertisement

ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಸಿಎಂ‌ ಶಾಕ್

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗೆ ಸಿಎಂ ಪ್ರಶ್ನೆಗಳ ಸುರಿಮಳೆ

ಖರ್ಚು ಕಡಿಮೆ ಮಾಡಲು ತಡೆಗೋಡೆ ನಿರ್ಮಿಸದ್ದಕ್ಕೆ, 90 ಡಿಗ್ರಿಯಲ್ಲಿ ಗುಡ್ಡ ಕಡಿದಿರುವುದಕ್ಕೆ ಸಿಎಂ‌ ಆಕ್ರೋಶ.ಕೇಂದ್ರ ಸಚಿವ ಗಡ್ಕರಿ ಅವರಿಗೆ ಪತ್ರ ಬರೆದು ವಿವರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಶಿರಾಡಿ ಘಾಟ್ ಆ 3: ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು.

ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಗೆ ವಿವರಿಸುತ್ತಾ, “ಒಟ್ಟು 45 km ನಲ್ಲಿ 35 km ಹೈವೇ ಕಾಮಗಾರಿ ಮುಗಿದಿದೆ. 10 km ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ” ಎಂದು ವಿವರಿಸಿದರು.

ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ SDRF ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು.

ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ‌ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು…

*ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಗೊಳಿಸಿಕೊಳ್ಳುವುದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ?

*ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ?

*ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು.

ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಶಾಸಕ ಶಿವಲಿಂಗೇಗೌಡರು, ಸಂಸದ ಶ್ರೇಯಸ್ ಪಟೇಲ್ , ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯಬಾರಾಯಣ್ ಸೇರಿ ಹಿರಿಯ ಅಧಿಕಾರಿಗಳ ತಂಡವೇ ಸ್ಥಳದಲ್ಲಿತ್ತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!