ಜನ ಮನದ ನಾಡಿ ಮಿಡಿತ

Advertisement

ಕರಾವಳಿಯ ಯವಕನ ವರಿಸಿದ ಬ್ರೆಝಿಲ್ ವಧು..

ಮಂಗಳೂರು: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿ ಅಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನ ಮಂಗಳೂರಿನಲ್ಲಿ ದೊರೆತಿದೆ. ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆಯು ಆ.೯ರಂದು ನಗರದ ಟಿ. ವಿ. ರಮಣ ಪೈ ಸಭಾಂಗಣದಲ್ಲಿ ನಡೆದಿದೆ.


ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಂತೆ ನೆರವೇರಿದೆ.
ನಗರದ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್‌ಗೆ ತೆರಳಿದ್ದರು. ೨೦೧೯ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. ೨೦೨೩ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!