ಜನ ಮನದ ನಾಡಿ ಮಿಡಿತ

Advertisement

ನವಿಲು ಮಾಂಸದ ಸಾರು ತಯಾರಿಸಿ ಯೂಟ್ಯೂಬ್​ನಲ್ಲಿ ಶೇರ್​ ಮಾಡಿದ ಯೂಟ್ಯೂಬರ್ ಅರೆಸ್ಟ್!

ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್​ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಲಾಗಿದೆ.

ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿಯಾಗಿರುವ ಯೂಟ್ಯೂಬರ್ ಕೋಡಂ ಪ್ರಣಯ್​, ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್​ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ನಲ್ಲಿ ಅಪ್‌ಲೋಡ್ ಮಾಡಿದ್ದ. ಅಷ್ಟೇ ಅಲ್ಲ, ಥಂಬ್‌ನೈಲ್​ನಲ್ಲಿ ನವಿಲು ಚಿತ್ರವನ್ನು ಹಾಕಿ ಅಪ್​ಲೋಡ್​ ಮಾಡಿದ್ದ.

ಈ ವಿಡಿಯೋ ನೋಡಿದ ನೆಟ್ಟಿಗರು ಕೋಡಂ ಪ್ರಣಯ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಯಾವಾಗ ಭಾರಿ ವಿರೋಧ ವ್ಯಕ್ತವಾಗಿದೆ ಎಂಬ ಗೊತ್ತಾಯಿತೋ ತಕ್ಷಣ ವಿಡಿಯೋವನ್ನು ಯೂಟ್ಯೂಬ್​ನಿಂದ ಪ್ರಣಯ್​ ಡಿಲೀಟ್​ ಮಾಡಿದ್ದಾರೆ. ಆದರೂ ಅಷ್ಟರಲ್ಲೇ ಈ ವಿಷಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿದಿದೆ. ಇದೀಗ ಪ್ರಣಯ್ ನನ್ನು ವಶಕ್ಕೆ ಪಡೆದು ಆತನಿಂದ ನವಿಲು ಗರಿ ಹಾಗೂ ಸಾಂಬರ್​ ಅನ್ನು ವಶಪಡಿಸಿಕೊಂಡಿದ್ದಾರೆ.

ಸದ್ಯ ವಶಕ್ಕೆ ಪಡೆದಿರುವುದನ್ನು ಅಧಿಕಾರಿಗಳು ಲ್ಯಾಬ್‌ಗೆ ಕಳುಹಿಸಿದ್ದಾರೆ. ಒಂದು ವೇಳೆ ಅದು ನವಿಲು ಖಾದ್ಯ ಎಂಬುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!