ಜನ ಮನದ ನಾಡಿ ಮಿಡಿತ

Advertisement

ಅಳಿವಿನಂಚಿನ ಅಳಿಲುಗಳನ್ನು ಬೇಟೆಯಾಡಿ ಭಕ್ಷ್ಯ ತಯಾರಿ; ಅರಣ್ಯಾಧಿಕಾರಿಗಳ ದಾಳಿ, ಆರೋಪಿಗಳು ಎಸ್ಕೇಪ್

ಅಳಿವಿನಂಚಿನ ಅಳಿಲುಗಳನ್ನು ಬೇಟೆಯಾಡಿ ಭಕ್ಷ್ಯ ತಯಾರಿ ನಡೆಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಆರೋಪಿಗಳು ಎಸ್ಕೇಪ್ ಆಗಿದ್ದಾರೆ.
ಸುಳ್ಯ: ಸಂಪಾಚೆ ವಲಯದ ದಬ್ಬಡ್ಕ ಗಟ್ಟಿ ಘಾಟ್ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ವಿನಾಶದಂಚಿನಲ್ಲಿರುವ ಮಲಬಾರ್ ದೈತ್ಯ ಅಳಿಲು ಹಾಗೂ ಹಾರುವ ಅಳಿಲುಗಳನ್ನು ಬೇಟೆಯಾಡಿ ಭಕ್ಷ್ಯ ತಯಾರಿಸುತ್ತಿದ್ದ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಬೇಯಿಸಿದ ಮಾಂಸವನ್ನು ವಶಕ್ಕೆ ಪಡೆದುಕೊಂಡ ಘಟನೆ ಸುಳ್ಯ ಗಡಿ ಭಾಗದಿಂದ ವರದಿಯಾಗಿದೆ ಕೊಡಗು ಸಂಪಾಚೆ ವಲಯದ ದಬ್ಬಡ್ಕದ ಗಟ್ಟಿ ಘಾಟ್ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟಿ ಆಡಿರುವ ಬಗ್ಗೆ ಸಂಪಾಜೆ ವಲಯ ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭಿಸಿತು. ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳ ಮನೆಗಳಿಗೆ ದಾಳಿ ಮಾಡಿ ಮಾಂಸ ಮತ್ತು ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಈ ಸಂದರ್ಭ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ ಆರೋಪಿಗಳನ್ನು ದಬ್ಬಡ್ಕ ಗ್ರಾಮದ ಮದನ್ ಕುಮಾರ್ (38) ಗಣಪತಿ ಬಿನ್ ಮಾಚಯ್ಯ (50) ಹಾಗೂ ಪ್ರಸನ್ನಕುಮಾರ್ (35) ಎಂಬುದಾಗಿ ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಯಡಿಯಲ್ಲಿ ಪ್ರಕಟಣೆ ದಾಖಲಿಸಿ ಕೊಂಡು ತನಿಖೆ ನಡೆಸಲಾಗುತ್ತಿದೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಯೈಟಿ ಪೂವಯ್ಯ ಮತ್ತು ವಲಯ ಅರನ್ಯಾಧಿಕಾರಿ ಮಧುಸೂಧನ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ನಿಸರ್ ಅಹಮದ್ ಗಸ್ತು ಅರಣ್ಯ ಪಾಲಕರಾದ ಚಂದ್ರಪ್ಪ ಕಾರ್ತಿಕ್ ಮನೋಜ್ ಕುಮಾರ್ ದುರ್ಗಾ ಪ್ರಸಾದ್ ಗಗನ್ ಶರತ್ ಶಂಕರ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!