ಜನ ಮನದ ನಾಡಿ ಮಿಡಿತ

Advertisement

ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನುಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮರೆದ ಖಾಸಗಿ ಬಸ್ ಸಿಬ್ಬಂದಿ

ಉಳ್ಳಾಲ: ಬಸ್ಸಿನಲ್ಲಿ ಕುಸಿದುಬಿದ್ದ ಮಹಿಳೆಯನ್ನು ಬಸ್ ಸಿಬ್ಬಂದಿ ನಾಟೆಕಲ್ ಕಣಚೂರು ಆಸ್ಪತ್ರೆಗೆ ಬಸ್ಸಿನಲ್ಲಿಯೇ ಕರೆತಂದು ಮಗದೊಮ್ಮೆ ಮಾನವೀಯತೆ ಮರೆದಿರುವ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ  ನಡೆದಿದೆ.

 


ವಿಟ್ಲ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಮರ್ಸಿ ಟ್ರಾವೆಲ್ಸ್ ಬಸ್ಸಿನಲ್ಲಿ ಮುಡಿಪು ಟಿಕೆಟ್ ಪಡೆದುಕೊಂಡಿದ್ದ ಮಹಿಳೆ ಮುಡಿಪು ತಲುಪಿದರೂ ಇಳಿಯುವುದು ಕಾಣಲಿಲ್ಲ. ಇದರಿಂದ ನಿರ್ವಾಹಕ ಯಾಕೂಬ್ ಎಂಬವರು ಮಹಿಳೆ ಸಮೀಪ ತೆರಳಿದಾಗ ಸಹಪ್ರಯಾಣಿಕರೊಬ್ಬರು, ಆಕೆ ಅಸ್ವಸ್ಥಳಾಗಿ ಕುಸಿದುಬಿದ್ದರೆಂದು ತಿಳಿಸಿದ್ದಾರೆ.

ತಕ್ಷಣ ಕರ‍್ಯಪ್ರವೃತ್ತರಾದ ಚಾಲಕ ಸವಾದ್ , ನಿರ್ವಾಹಕ ಯಾಕೂಬ್ ೧೦ ಕಿ.ಮೀ ಉದ್ದಕ್ಕೆ ಬಸ್ಸನ್ನು ತಂದು ನಾಟೆಕಲ್ ಕಣಚೂರು ಆಸ್ಪತ್ರೆಯೊಳಕ್ಕೆ ಕೊಂಡೊಯ್ದು ತುರ್ತು ನಿಗಾ ಘಟಕದಲ್ಲಿ ದಾಖಲಿಸಿದ್ದಾರೆ. ಘಟನೆ ಕುರಿತ ವೀಡಿಯೋ ಕಣಚೂರು ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಮಹಿಳೆ ಆರೋಗ್ಯದಲ್ಲಿ ಚೇತರಿಕೆ ಕಂಡುಬAದಿರುವುದಾಗಿ ಬಸ್ ಸಿಬ್ಬಂದಿ ತಿಳಿಸಿದ್ದಾರೆ.ಮಂಗಳೂರು ನಗರದಲ್ಲಿ ಇದೇ ಮಾದರಿಯಲ್ಲಿ ಎರಡು ಘಟನೆಗಳು ಮಾನವೀಯತೆಗೆ ಸಾಕ್ಷಿಯಾಗಿದ್ದರೆ, ಉಡುಪಿಯಲ್ಲೂ ವಾರದ ಹಿಂದೆ ಇಂತಹದ್ದೇ ಘಟನೆ ನಡೆದಿದ್ದು, ಇದೀಗ ಮುಡಿಪು ಭಾಗದಲ್ಲಿ ಖಾಸಗಿ ಬಸ್ ಸಿಬ್ಬಂದಿ ನಡೆಸಿದ ಕಾರ್ಯ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.

ಖಾಸಗಿ ಬಸ್ಸಿನಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ಬಸ್ ಸಿಬ್ಬಂದಿ ದಾಖಲಿಸಿದರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!