ಜನ ಮನದ ನಾಡಿ ಮಿಡಿತ

Advertisement

ಟ್ರ್ಯಾಕ್ ಮ್ಯಾನ್ ಸಮಯಪ್ರಜ್ಞೆ: ಉಳಿಯಿತು ನೂರಾರು ಪ್ರಯಾಣಿಕರ ಪ್ರಾಣ..!

ರೈಲ್ವೆ ಟ್ರ್ಯಾಕ್ ಮ್ಯಾನ್ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ರೈಲು ದುರಂತ ತಪ್ಪಿದದ್ದು, ನೂರಾರು ಪ್ರಯಾಣಿಕರ ಪ್ರಾಣ ಉಳಿದಿದೆ. ಟ್ರ್ಯಾಕ್ ಮ್ಯಾನ್ ಮಹಾದೇವ ಅವರ ಕಾರ್ಯಕ್ಕೆ ಕೊಂಕಣ ರೈಲ್ವೆ ವಲಯದ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ಕೊಂಕಣ ರೈಲ್ವೆಯ ಕುಮಟಾ-ಹೊನ್ನಾವರ ನಡುವೆ ಹಳಿಗಳ ಜೋಡಣೆಯ ವೆಲ್ಡಿಂಗ್ ಬಿಟ್ಟಿತ್ತು. ಇದನ್ನು ಬುಧವಾರ ನಸುಕಿನ 4.50ರ ಸಮಯದಲ್ಲಿ ಟ್ರ್ಯಾಕ್ ಮ್ಯಾನ್ ಮಹದೇವ ಅವರು ಗಮನಿಸಿದ್ದಾರೆ. ಕೂಡಲೇ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ತಿರುವನಂತಪುರ-ದಿಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲನ್ನು ನಿಲ್ಲಿಸಲು ಕೂಡಲೇ ಕುಮಟಾ ನಿಲ್ದಾಣಕ್ಕೆ ಕರೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಿ ರೈಲು ನಿಲ್ದಾಣದಿಂದ ಹೊರಟಿತ್ತು. ನಂತರ ಮಹಾದೇವ ರಾಜಧಾನಿ ರೈಲಿನ ಲೋಕೊ ಪೈಲಟ್ ಗೆ ಕರೆ ಮಾಡಿದರು. ಆದರೆ ಸಂಪರ್ಕ ಸಾಧ್ಯವಾಗಲಿಲ್ಲ. 8 ನಿಮಿಷದಲ್ಲಿ ರೈಲು ವೆಲ್ಡಿಂಗ್ ಬಿಟ್ಟಿದ್ದ ಸ್ಥಳಕ್ಕೆ ಬರುವುದರಲ್ಲಿತ್ತು. ತಡ ಮಾಡದ ಮಹಾದೇವ, ಹಳಿ ಮೇಲೆ ಓಡಿ ಐದು ನಿಮಿಷದಲ್ಲಿ ಅರ್ಧ ಕಿ.ಮೀ. ಕ್ರಮಿಸಿ ರೈಲಿಗೆ ನಿಲ್ಲುವಂತೆ ಸೂಚನೆ ನೀಡಿದರು. ಇದರಿಂದ ಸಂಭಾವ್ಯ ಅಪಾಯ ತಪ್ಪಿತು. ಸಿಬ್ಬಂದಿ ಹಳಿ ಜೋಡಣೆ ಬಿಟ್ಟಿದ್ದ ಸ್ಥಳದಲ್ಲಿ ವೆಲ್ಡಿಂಗ್ ಮಾಡಿದ ನಂತರ ರೈಲು ಕಾರವಾರದ ಕಡೆಗೆ ಪ್ರಯಾಣ ಬೆಳೆಸಿತು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!