ಜನ ಮನದ ನಾಡಿ ಮಿಡಿತ

Advertisement

ಪಡುಕೋಣಾಜೆ ಸರ್ಕಾರಿ ಶಾಲೆಯಲ್ಲಿ ಬಾಲಕ ಬಾಲಕಿಯರ ತಾಲೂಕು ಮಟ್ಟದ ಥ್ರೂ ಬಾಲ್ ಪಂದ್ಯಾಟದ ಫಲಿತಾಂಶ ಪ್ರಕಟ

ದಕ್ಷಿಣ ಕನ್ನಡ : ಸರ್ಕಾರಿ ಪ್ರೌಢಶಾಲೆ ಪಡುಕೋಣಾಜೆ ಇಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟವನ್ನು ಏರ್ಪಡಿಸಲಾಗಿತ್ತು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡಬಿದ್ರೆ, ಸರ್ಕಾರಿ ಪ್ರೌಢಶಾಲೆ ಪಡುಕೋಣಾಜೆ, ಹಾಗೂ ಇತರರ ಸಹಕಾರದೊಂದಿಗೆ ಪಂದ್ಯಾಟವನ್ನು ಏರ್ಪಡಿಸಲಾಗಿದ್ದು, ಯಾವುದೇ ಅಡಚಣೆಗಳಿಲ್ಲದೆ, ಮಳೆರಾಯನ ಬಿಡುವಿನೊಂದಿಗೆ ಪಂದ್ಯಾಟ ಉತ್ತಮವಾಗಿ ಮೂಡಿ ಬಂತು. ಸಂಜೆ ವೇಳೆಗೆ ಪಂದ್ಯದ ಫಲಿತಾಂಶ ಪ್ರಕಟವಾಗಿದ್ದು, ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ ಪುತ್ತಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದು, ಮಹಮ್ಮದೀಯ ಆಂಗ್ಲ ಮಾಧ್ಯಮ ಶಾಲೆ, ಕೋಟೆ ಬಾಗಿಲು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

 


ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಶಿರ್ಥಾಡಿ ಪ್ರಥಮ, ಬ್ಲೋಸಂ ಆಂಗ್ಲ ಮಾಧ್ಯಮ ಶಾಲೆ ಬೆಳುವಾಯಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ ಪುತ್ತಿಗೆ ಪ್ರಥಮ ಹಾಗೂ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಶಿರ್ಥಾಡಿ ದ್ವಿತೀಯ ಸ್ಥಾನವನ್ನು ಪಡೆದಿದ್ದು, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮೂಡುಕೋಣಜೆ ಪ್ರಥಮ ಸ್ಥಾನವನ್ನು ಪಡೆದಿದ್ದು ಮಹಮ್ಮದ್ ಯ ಆಂಗ್ಲ ಮಾಧ್ಯಮ ಶಾಲೆ, ಕೋಟೆ ಬಾಗಿಲು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.  ತೀರ್ಪುಗಾರರಾಗಿ ನವೀನ್ ಅಂಬೂರಿ ಆಗಮಿಸಿದ್ದರು. ಸಂಜೆ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಸ್ಥಳೀಯ ಪಂಚಾಯಿತ್ ಸದಸ್ಯ ಸಂತೋಷ್ ಶೆಟ್ಟಿ, ಸ್ಥಳೀಯ ಪಂಚಾಯಿತಿ ಸದಸ್ಯೆ ಲತಾ ಹೆಗ್ಡೆ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಸಹಿತ ಹಲವರು ಪಾಲ್ಗೊಂಡಿದ್ದು, ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ಭಾಷಾ ಶಿಕ್ಷಕಿ ಅನ್ನಪೂರ್ಣೇಶ್ವರಿ ನೆರವೇರಿಸಿದ್ದು, ವಂದನಾರ್ಪಣೆಯನ್ನು ದೈಹಿಕ ಶಿಕ್ಷಣ ಶಿಕ್ಷಕರು ಜಯಶ್ರೀ ನೆರವೇರಿಸಿದರು.

 

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!