ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪ್ರಜಾಪ್ರಭುತ್ವದ ಮೌಲ್ಯ ಸಾರಿದ ಬೃಹತ್ ಮಾನವ ಸರಪಳಿ; ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿ

ಉಡುಪಿ: ಪ್ರಜಾಪ್ರಭುತ್ವದ ಮೌಲ್ಯ ಸಾರಿದ ಬೃಹತ್ ಮಾನವ ಸರಪಳಿ; ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿ

ಶಿರೂರಿನಿಂದ ಹೆಜಮಾಡಿಯವರೆಗೆ ಮೊಳಗಿದ ಜೈ ಹಿಂದ್, ಜೈ ಕರ್ನಾಟಕ ಘೋಷಣೆ

ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಉಡುಪಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ವರೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಮಾರು 107 ಕಿ. ಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮ ನಡೆಯಿತು.


ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರಸ್ಪರ ಕೈಯನ್ನು ಹಿಡಿದುಕೊಂಡು ಮಾನವ ಸರಪಳಿ ರಚಿಸಿದರು. ಉಡುಪಿ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಆಯೋಜಿಸಿದ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಚಂಡೆ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಂವಿಧಾನದ ಮೌಲ್ಯಗಳನ್ನು ಎಲ್ಲೆಡೆ ಪಸರಿಸುವ ಉದ್ದೇಶದಿಂದ ವಿನೂತನವಾದ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಆಯೋಜಿಸಿದ್ದು, ಪ್ರಜಾಪ್ರಭುತ್ವವು ಇನ್ನಷ್ಟು ಗಟ್ಟಿಗೊಂಡು ಪ್ರತಿಯೊಬ್ಬರ ಬದುಕಿನ ಭಧ್ರ ಬುನಾದಿಯಾಗಲಿ ಎಂದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಮಾತನಾಡಿ, ನಮ್ಮ ಜವಾಬ್ದಾರಿಗಳ ಅರ್ಥೈಸಿಕೊಂಡಾಗ ಮಾತ್ರ ನಮ್ಮ ಹಕ್ಕುಗಳಿಗೆ ಅರ್ಥ ಬರುತ್ತದೆ. ನಾಗರಿಕನ ಜವಾಬ್ದಾರಿಯುತ ನಡವಳಿಕೆಯಿಂದ ದೇಶದ ಶಾಂತಿ ಸುವ್ಯವಸ್ಥೆ ಚೆನ್ನಾಗಿರುತ್ತದೆ. ಸಂವಿಧಾನದ ಆಶಯಗಳನ್ನು ನಮ್ಮ ನಡವಳಿಕೆಯಲ್ಲಿ ತೋರಿಸಬೇಕು. ಸಂವಿಧಾನದ ವಿಚಾರಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಸ್ವಾತಂತ್ರ‍್ಯ ತಂದುಕೊಟ್ಟ ಮಹಾತ್ಮರ ಬಲಿದಾನಗಳಿಗೆ ಅರ್ಥ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ರಚಿಸಿದ “ಪ್ರಜಾಪ್ರಭುತ್ವ ಆಶಯದ ಕಿರು ಹೊತ್ತಿಗೆಯನ್ನು” ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಚಂಡೆ ಹಾಗೂ ಕಂಗೀಲು, ಯಕ್ಷಗಾನ ಕಲಾವಿದರು ಹಾಗೂ ವಿವಿಧ ಕಲಾ ತಂಡಗಳು ಭಾಗವಹಿಸಿದವು.
500 ಮೀ ಉದ್ದದ ರಾಷ್ಟ್ರಧ್ವಜ ಹಾಗೂ ಕರ್ನಾಟಕ ರಾಜ್ಯದ ನಾಡ ಧ್ವಜವನ್ನು ಕೈಯಲ್ಲಿ ಹಿಡಿದು ಪ್ರದರ್ಶಿಸಲಾಯಿತು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎರಡು ಕೈಯಗಳನ್ನು ಮೇಲೆತ್ತಿ ಜೈ ಹಿಂದ್ ಜೈ ಕರ್ನಾಟಕ ಘೋಷಣೆ ಕೂಗುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಿಡಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಡಿ.ಎಫ್.ಒ ಗಣಪತಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ. ಜಿ.ಎಸ್ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ರೋಟರಿಯ ಗರ್ವನರ್ ದೇವಾನಂದ್, ಸಹಕಾರಿ ಸಂಘದ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಸ್ವಾತಂತ್ರ್ಯ ಹೋರಾಟಗಾರ ಮಲ್ಪೆ ರಾಘವೇಂದ್ರ, ರೋಟರಿಯ ಕ್ಲಬ್‌ನ ಸದಸ್ಯರು, ಸಂಘ-ಸಂಸ್ಥೆಯ ಪದಾಧಿಕಾರಿಗಳು, ಯುವಕ-ಯುವತಿ ಮಂಡಳಿಗಳು, ಸ್ವ-ಸಹಾಯ ಸಂಘದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!