ಜನ ಮನದ ನಾಡಿ ಮಿಡಿತ

Advertisement

ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಗಂಭೀರ ಆರೋಪ: ಸಂತ್ರಸ್ತ ಮಹಿಳೆಯಿಂದ ದೂರು ದಾಖಲು

ರಾಮನಗರ: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧ ಸ್ಥಳೀಯ ಬಿಜೆಪಿ ಕಾರ್ಯಕರ್ತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹನಿಟ್ರ್ಯಾಪ್‌ಗೆ ಬಳಿಸಿಕೊಂಡಿರುವ ಆರೋಪ ಕೇಳಿ ಬಂದಿದೆ. ರಾಜರಾಜೇಶ್ವರಿ ನಗರದ ಸುಮಾರು 37 ವರ್ಷದ ಕಾರ್ಯಕರ್ತೆ ನೀಡಿದ ದೂರಿನ ಮೇರೆಗೆ, ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ರಾತ್ರಿ ಪ್ರಕರಣ ದಾಖಲಾಗಿದೆ.

ತಮ್ಮ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಕುರಿತು ದೂರು ನೀಡುವ ಸಲುವಾಗಿ ಮಹಿಳೆ ಬುಧವಾರ ಮಧ್ಯಾಹ್ನ ರಾಮನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ವಿಚಾರಿಸಿ ಸಂಪೂರ್ಣ ಮಾಹಿತಿ ಪಡೆದ ಪೊಲೀಸರು, ನಂತರ ಕೃತ್ಯ ನಡೆದ ಸ್ಥಳದ ವ್ಯಾಪ್ತಿಯ ಕಗ್ಗಲಿಪುರ ಠಾಣೆಗೆ ಹೋಗಿ ದೂರು ಕೊಡುವಂತೆ ಸೂಚಿಸಿದ್ದಾರೆ.

ಅದರಂತೆ, ಕಗ್ಗಲಿಪುರ ಠಾಣೆಗೆ ಬಂದ ಮಹಿಳೆ ತನ್ನ ಮೇಲೆ ನಡೆದ ಎರಡು ವರ್ಷಗಳ ಹಿಂದೆ ನಡೆದಿರುವ ಲೈಂಗಿಕ ದೌರ್ಜನ್ಯ ಮತ್ತು ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಕುರಿತು ದೂರು ಕೊಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ದೂರು ಪರಿಶೀಲಿಸಿದ ಠಾಣೆಯ ಅಧಿಕಾರಿಗಳು, ನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯಾಗಿ ಶಾಸಕ ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ದೂರು ದಾಖಲಾಗಿದೆ. 2020 ರಿಂದ ನಡೆದ ಘಟನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಸಮಾಜ ಸೇವಾ ಕಾರ್ಯದ ಮೂಲಕ ಮುನಿರತ್ನ ಅವರಿಗೆ ಪರಿಚಯವಾಗಿದ್ದ ಮಹಿಳೆ, ನಂತರ ಅವರಿಗೆ ಹತ್ತಿರವಾಗಿ ಬಿಜೆಪಿ ಸೇರಿಕೊಂಡು ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಮಹಿಳೆಯನ್ನು ಕಗ್ಗಲಿಪುರ ಠಾಣೆ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗೆ ಕರೆದೊಯ್ಯುತ್ತಿದ್ದ ಮುನಿರತ್ನ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮುನಿರತ್ನ ಜೈಲಿನ ಭವಿಷ್ಯ ಇಂದು ನಿರ್ಧಾರವಾಗಲಿತ್ತು. ಅಷ್ಟರಲ್ಲಿ ಮತ್ತೊಂದು ಕೇಸ್ ದಾಖಲಾಗಿದೆ. ಹೌದು ಮುನಿರತ್ನಗೆ ಗುತ್ತಿಗೆದಾರ ಚಲುವರಾಜುಗೆ ವಂಚಿಸಿದ್ದ ಪ್ರಕರಣದಲ್ಲಿ ರಿಲೀಫ್‌ ಸಿಕ್ಕಿದ್ದರೂ, ಜಾತಿ ನಿಂದನೆ ಕೇಸ್ ನ ಜಾಮೀನು ಅರ್ಜಿಯ ಆದೇಶ ಇಂದು ನೀಡಬೇಕಿತ್ತು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!