ಜನ ಮನದ ನಾಡಿ ಮಿಡಿತ

Advertisement

264 ಗ್ರಾಂ ತೂಕದ ಚಿನ್ನಾಭರಣವನ್ನು ಕಳವುಗೈದಿರುವ ದೇವಳದ ಅರ್ಚಕ ನರಸಿಂಹ ಭಟ್

ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದ ಭಕ್ತರು ಅರ್ಪಿಸಿದ ಸರಿ-ಸುಮಾರು 264 ಗ್ರಾಂ ತೂಕದ ಚಿನ್ನಾಭರಣವನ್ನು ಕಳವುಗೈದಿರುವ ದೇವಳದ ಅರ್ಚಕ ನರಸಿಂಹ ಭಟ್ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಗೊಳ್ಳಿ ಶ್ರೀ ಮಾಹಾಂಕಾಳಿ ಅಮ್ಮನವರ ದೇವಳದಲ್ಲಿ ಅರ್ಚಕರಾಗಿ ಕೆಲಸವನ್ನು ನಿರ್ವಹಿಸಲು ಮಾಸಿಕ ಸಂಬಳದ ಜೋತೆ ವಾಸಕ್ಕೆ ಬಾಡಿಗೆ ಮನೆಯನ್ನು ನೀಡಿ ಅರ್ಚಕ ನರಸಿಂಹ ಭಟ್ ರವರನ್ನು ದೇವಸ್ಥಾನದ ಆಡಳಿತ ಮಂಡಳಿ ನೇಮಕ ಮಾಡಿಕೊಂಡಿದೆ.

 

ಆಡಳಿತ ಮಂಡಳಿ ಹಾಗೂ ಭಕ್ತರು ಹರಕೆ ಮತ್ತು ಸೇವೆ ರೂಪದಲ್ಲಿ ನೀಡಿರುವ ನಾನಾ ಬಗೆಯ ಚಿನ್ನಾಭರಣಗಳನ್ನು ದೇವರ ಮೂರ್ತಿಗೆ ಅಲಂಕಾರ ಮಾಡಿದ ರೀತಿಯಲ್ಲಿ ಪ್ರತಿದಿನ ಇರುತ್ತಿತ್ತು. ವರ್ಷಂಪ್ರತಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಅಂಗವಾಗಿ ಸೆ.21 ರ ಸಂಜೆ 7 ಗಂಟೆ ಸುಮಾರಿಗೆ ದೇವಸ್ಥಾನದ ಗರ್ಭಗುಡಿಯಲ್ಲಿ ಪೂಜಾ ಕೈಂಕರ್ಯಗಳನ್ನು ಮಾಡುತ್ತಿರುವ ಆರೋಪಿತ ಅರ್ಚಕರಲ್ಲಿ ಉತ್ಸವದ ಸಲುವಾಗಿ ದೇವರ ಮೈಮೇಲಿದ್ದ ಚಿನ್ನಾಭರಣಗಳನ್ನು ಶುದ್ಧಚಾರ ಮಾಡುವ ಬಗ್ಗೆ, ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿ ಕೇಳಿಕೊಂಡಿದೆ.

ದೇವರ ಮೇಲಿದ್ದ ಚಿನ್ನಾಭರಣಗಳನ್ನು ಅರ್ಚಕರಿಂದ ಪಡೆದುಕೊಂಡಿದ ದೇವಸ್ಥಾನದ ಆಡಳಿತ ಮಂಡಳಿ ಆಭರಣಗಳನ್ನು ಸೂಕ್ಷ್ಮವಾಗಿ ಪರೀಕ್ಷಿಶಿಸಿದೆ. ದೇವರ ಮೈ ಮೇಲೆ ಇದ್ದ ಆಭರಣಗಳು ಮೂಲ ರೂಪದಲ್ಲಿ ಇರದ ಬೇರೆ ರೀತಿಯಲ್ಲಿ ಇದ್ದ ಕಾರಣ ಆಡಳಿತ ಮಂಡಳಿಗೆ ಸಂಶಯ ಬಂದು ಅರ್ಚಕರನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

264 ಗ್ರಾಂ ತೂಕದ ಅಂದಾಜು 22 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಅರ್ಚಕರಿಂದ ವಂಚನೆಗೆ ಒಳಗಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದ್ದು ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೀನುಗಾರರ ಆರಾಧ್ಯ ದೇವತೆ ಹಾಗೂ ಗಂಗೊಳ್ಳಿ, ಗ್ರಾಮದ ಗ್ರಾಮ ದೇವತೆಯಾದ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ಮ್ಮೆ ಮೇಲಿದ್ದ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ದೇವರ ಪೂಜಾ ಕೈಂಕರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದ ಅರ್ಚಕ ನರಸಿಂಹ ಭಟ್ ಸ್ವತಃ ದೋಚಿರುವ ಪ್ರಕರಣದ ಬಗ್ಗೆ, ಭಕ್ತ ಸಮೂಹ ಬೆಚ್ಚಿ ಬಿದ್ದಿದೆ. ನವರಾತ್ರಿ ಉತ್ತವದ ಮುನ್ನವೇ ಆರ್ಚಕ ನರಸಿಂಹ ಭಟ್ಟನ ಶೋಗಲಾಡಿತನ ಬಯಲಾಗಿದೆ.

ಅಂದಾಜು 3.20 ಲಕ್ಷ ರೂ. ಮೌಲ್ಯದ 40 ಗ್ರಾಂ ತೂಕದ ಚಿನ್ನದ ಜೋಬಿನ ಸರ, 5.84 ಲಕ್ಷ ರೂ. ಮೌಲ್ಯದ 73 ಗ್ರಾಂ ತೂಕದ ಹವಳ ಸೇರಿದ ಚಿನ್ನದ ಕಾಸಿ ತಾಳಿ ಸರ, 5.84 ಲಕ್ಷ ರೂ. ಮೌಲ್ಯದ 73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 5.12 ಲಕ್ಷ ರೂ. ಮೌಲ್ಯದ 64 ಗ್ರಾಂ ತೂಕದ ಚಿನ್ನದ ನಕ್ಷೆಸ್, 48 ಸಾವಿರದ 6 ಗ್ರಾಂ ತೂಕದ 3 ಚಿನ್ನದ ತಾಳಿ, 64 ಸಾವಿರದ 8 ಗ್ರಾಂ ತೂಕದ ಚಿನ್ನದ ಚೈನ್ ಸರ ಸಹಿತ ಒಟ್ಟು ರೂ 21.12 ಲಕ್ಷ ರೂ. ಮೌಲ್ಯದ 264 ಗ್ರಾಮ್ ತೂಕದ ಚಿನ್ನಾಭರಣಗಳನ್ನು ದೇವರ ಮೂರ್ತಿಯ ಮೇಲಿನಿಂದ ತೆಗೆದು ಕಳವುಗೈದಿದ್ದಾನೆ.

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಿಗೆ ಮತ್ತು ಭಕ್ತರಿಗೆ ಯಾವುದೇ ಸಂಶಯ ಬರಬಾರದೆಂಬ ಉದ್ದೇಶದಿಂದ ಕೆಲವು ನಕಲಿ ಚಿನ್ನಾಭರಣಗಳನ್ನು ದೇವರ ಮೂರ್ತಿಯ ಮೇಲೆ ಹಾಕಿದ್ದರು ಎನ್ನಲಾಗಿದೆ. ಕಳವು ಮಾಡಿದ ಚಿನ್ನಾಭರಣಗಳನ್ನು ತನ್ನ ಸ್ವಂತಕ್ಕೆ ಬೇರೆ ಬೇರೆ ಬ್ಯಾಂಕುಗಳಲ್ಲಿ ಅಡಮಾನ ಇಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಗಂಗೊಳ್ಳಿ ಪೊಲೀಸರು ಆರೋಪಿ ಅರ್ಚಕ ನರಸಿಂಹ ಭಟ್ಟನನ್ನು ಬಂಧಿಸಿದ್ದು ಹೆಚ್ಚಿನ ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!