ಜನ ಮನದ ನಾಡಿ ಮಿಡಿತ

Advertisement

ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್ಸು-ಕಂಟೇನರ್ ನಡುವೆ ಡಿಕ್ಕಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸೆ.24ರಂದು ಪೂರ್ವಾಹ್ನ 11.30ರ ವೇಳೆಗೆ ನಡೆದಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಎರಡೂ ಬದಿಯೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ ಎಂದು ವರದಿಯಾಗಿದೆ.

 


ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್ಸಿನ ಚಾಲಕ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಟ್ರಾಫಿಕ್ ಜಾಮ್:
ಅಪಘಾತದ ರಭಸದಿಂದಾಗಿ ಎರಡೂ ವಾಹನಗಳು ಜಖಂಗೊಂಡಿದ್ದು ರಸ್ತೆಯಲ್ಲೇ ನಿಂತಿವೆ. ಕೆಎಸ್‌ಆರ್‌ಟಿಸಿ ಬಸ್ಸನ್ನು ಹೆದ್ದಾರಿಯಿಂದ ತೆರವುಗೊಳಿಸದೇ ಇರುವುದರಿಂದ ಇಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುಮಾರು 1 ಗಂಟೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಹೆದ್ದಾರಿಯ ಎರಡೂ ಬದಿಯಲ್ಲೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು ವಾಹನ ಚಾಲಕರು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!