ಜನ ಮನದ ನಾಡಿ ಮಿಡಿತ

Advertisement

ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ : ಮಹಾರಾಷ್ಟ್ರ ಮುಖ್ಯಮಂತ್ರಿ

ಮುಂಬೈ: ಶ್ರೀಸಾಮಾನ್ಯರ ಕಾರಿನ ಕನಸು ನನಸು ಮಾಡಿದ್ದ ಮಹಾನ್ ವ್ಯಕ್ತಿ ದೇಶದ ಖ್ಯಾತ ಹಿರಿಯ ಕೈಗಾರಿಕೋದ್ಯಮಿ ಹಾಗೂ ಟಾಟಾ ಸಮೂಹದ ಅಧ್ಯಕ್ಷ ರತನ್ ಟಾಟಾ (86) ಬುಧವಾರ ವಿಧಿವಶರಾಗಿದ್ದಾರೆ. ಟಾಟಾ ಅವರ ನಿಧನಕ್ಕೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕಳೆದ ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅನಾರೋಗ್ಯ ಹಿನ್ನೆಲೆಯಲ್ಲಿ ದಾಖಲಾಗಿದ್ದ ರತನ್ ಟಾಟಾ ಬುಧವಾರ ರಾತ್ರಿ ಕೊನೆಯುಸಿರೆಳೆದರು. ಅಂತಿಮ ದರ್ಶನಕ್ಕಾಗಿ ಅವರ ಪಾರ್ಥಿವ ಶರೀರವನ್ನು ದಕ್ಷಿಣ ಮುಂಬೈನ ರಾಷ್ಟ್ರೀಯ ಲಿಲಿತ ಕಲಾ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದ್ದು ಬೆಳಗ್ಗೆ 10 ರಿಂದ ಮಧ್ಯಾಹ್ನ 3:30 ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 3.30ಕ್ಕೆ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ವರ್ಲಿ ಚಿತಾಗಾರಕ್ಕೆ ಕೊಂಡೊಯ್ಯಲಾಗುವುದು ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ತಿಳಿಸಿದ್ದಾರೆ. ಈ ವೇಳೆ ಕೇಂದ್ರದ ಪರವಾಗಿ ಗೃಹ ಸಚಿವ ಅಮಿತ್ ಶಾ ರತನ್ ಟಾಟಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.’

 

ಶೋಕಾಚರಣೆಯ ಸಂಕೇತವಾಗಿ ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳ ಮೇಲೆ ತ್ರಿವರ್ಣ ಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿದ ಮುಖ್ಯಮಂತ್ರಿ ಶಿಂದೆ. 150 ವರ್ಷಗಳಷ್ಟು ಹಳೆಯದಾದ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸಿದ ಜೀವಂತ ದಂತಕಥೆ ರತನ್ ಟಾಟಾ ಅವರದ್ದು, ಅವರು ಕಾಲಕಾಲಕ್ಕೆ ತೆಗೆದುಕೊಂಡಿರುವ ನಿರ್ಣಯಗಳು ಟಾಟಾ ಸಮೂಹ ಸಂಸ್ಥೆಗಳು ಈ ಮಟ್ಟಕ್ಕೆ ಬೆಳೆಯಲು ಸ್ಪೂರ್ತಿಯಾಗಿವೆ ಎಂದು ಹೇಳಿಕೊಂಡಿದ್ದಾರೆ.

ಇನ್ನು ರತನ್ ಟಾಟಾ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಗುರುವಾರ ನಡೆಯಬೇಕಿದ್ದ ರಾಜ್ಯ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಮಹಾರಾಷ್ಟ್ರ ಸಚಿವ ದೀಪಕ್ ಕೇಸರ್ಕರ್ ಹೇಳಿದ್ದಾರೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!