ಜನ ಮನದ ನಾಡಿ ಮಿಡಿತ

Advertisement

ಉಡುಪಿ ಮೂಲದ ಉದ್ಯಮಿ ತೀರ್ಥಹಳ್ಳಿಯ ಲಾಡ್ಜ್ ನಲ್ಲಿ ನೇಣಿಗೆ ಶರಣು

ತೀರ್ಥಹಳ್ಳಿ: ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಮನನೊಂದ ಉಡುಪಿ ಮೂಲದ ಉದ್ಯಮಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ನಡೆದಿದೆ.
ಉಡುಪಿಯ ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಹಳ್ಳಿಯ ವಸತಿಗೃಹವೊಂದರಲ್ಲಿ ವಾಸ್ತವ್ಯ ಹೂಡಿದ್ದರು. ಕೊಠಡಿಯಿಂದ ಯಾವುದೇ ಶಬ್ದ ಕೇಳಿಸದಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.


ಸುಮಾರು ಆರು ಪುಟಗಳ ಡೆತ್ ನೋಟ್ ಬರೆದಿಟ್ಟು ಸಾವಿನ ಕಾರಣ ವಿವರಿಸಿದ್ದಾರೆ. ಕೆಲವೊಂದು ಹೆಸರುಗಳನ್ನು ಬರೆದಿದ್ದು ಮತ್ತೆ ಕೆಲವು ತನ್ನ ವ್ಯವಹಾರದ ವಿಷಯಗಳನ್ನು ಬರೆದಿಟ್ಟಿದ್ದರು ಎಂದು ಪೊಲೀಸ್‌ ಮೂಲದಿಂದ ತಿಳಿದುಬಂದಿದೆ. ಪ್ರಸನ್ನ ಶೆಟ್ಟಿ, ಬೆಂಗಳೂರಿನಲ್ಲಿ ರೆಸ್ಟೋರೆಂಟ್, ಬೇಕರಿ ಮತ್ತು ಹಣದ ವ್ಯವಹಾರವನ್ನು ನಡೆಸುತ್ತಿದ್ದರು

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!