ಜನ ಮನದ ನಾಡಿ ಮಿಡಿತ

Advertisement

ಲೋಕಸಭಾ ಚುನಾವಣೆಯಲ್ಲಿ “ಗ್ಯಾರಂಟಿ” ಭರವಸೆ, ಕಾಂಗ್ರೆಸ್ ಗೆಲುವಿನ ತಂತ್ರ

ಕಾಂಗ್ರೆಸ್: ಯಾರೂ ನಿರೀಕ್ಷಿಸಿರದಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಕಾಂಗ್ರೆಸ್ ತನ್ನ ಐತಿಹಾಸಿಕ ಗೆಲುವನ್ನು ಕಂಡಿದ್ದು ಎಲ್ಲರಿಗೂ ತಿಳಿದಿದೆ.
ಚುನಾವಣಾ ಪ್ರಚಾರದಲ್ಲಿ ಬಳಸಿದ ಅಸ್ತ್ರ “ಗ್ಯಾರಂಟಿ ಯೋಜನೆಗಳು” ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರದಾರಿ ಎಂದು ಹೇಳಿದರೆ ತಪ್ಪಾಗಲಾರದು.

ಈ ಗೆಲುವಿನ ಉತ್ತೇಜನಗೊಂಡ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆಯಲ್ಲಿಯೂ ಇದೇ ಅಸ್ತ್ರವನ್ನು ಬಳಸಲು ನಿರ್ಧರಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರಲು ಚಿಂತಿಸಿದೆ.
ಅದಲ್ಲದೆ ಸದ್ಯದ ವರದಿಯ ಪ್ರಕಾರ ಈ ಭಾರಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂಧಿ ಉತ್ತರ ಕರ್ನಾಟಕ ಅಥವಾ ಮಧ್ಯ ಕರ್ನಾಟಕದಿಂದ ಕಣಕ್ಕಿಳಿಯಲಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ವರದಿ ಸಿದ್ಧಪಡಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದು ಪರಾಭವಗೊಂಡಿರುವ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ. ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಕೈ ಪಕ್ಷವು ಬಿಜೆಪಿಯನ್ನು ಸೋಲಿಸಿ ತನ್ನ ಗೆಲುವನ್ನು ಸಾಧಿಸಲು ಅಸ್ತ್ರಗಳನ್ನು ಸಿದ್ಧಪಡಿಸುತ್ತಿದೆ. ಗೆಲುವು ಯಾರ ಪಾಲಿಗೆ ಎಂದು ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!