ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ ಸುಂದರ್ ರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ; ಸಾಧಕರಿಗೆ ಗೌರವ

ಮುಲ್ಕಿ: ಬಂಟರ ಸಂಘದ ವತಿಯಿಂದ 2023-24 ನೇ ಸಾಲಿನ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಮುಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ಮುಲ್ಕಿ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ 2024ನೇ ಸಾಲಿನ ಮುಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನವನ್ನು ವಿಕೆ ಗ್ರೂಪ್ ಚೇರ್ಮನ್ ಕರುಣಾಕರ ಎಂ ಶೆಟ್ಟಿ, ಮಧ್ಯ ಗುತ್ತುರವರಿಗೆ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ರವರು ಪ್ರಧಾನ ಮಾಡಿ ಮಾತನಾಡಿ ನಶಿಸಿ ಹೋಗುತ್ತಿರುವ ಮಾನವೀಯ ಸಂಬಂಧಗಳನ್ನು ಬೆಸೆಯುವ ಕಾರ್ಯ ಸಂಘ-ಸಂಸ್ಥೆಗಳಿಂದ ಆಗಬೇಕು, ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಹಸ್ತ ಅಭಿನಂದನೀಯ ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಂದಿಕೂರು ಎಜುಕೇಶನ್ ಟ್ರಸ್ಟ್ ನ ಅನಿಲ್ ಶೆಟ್ಟಿ ಕೋಂಜಾಲುಗುತ್ತು, ಬೆಂಗಳೂರು ಬಂಟರ ಸಂಘದ ವಿದ್ಯಾರ್ಥಿ ವೇತನ ಮತ್ತು ಪ್ರಶಸ್ತಿ ಸಮಿತಿಯ ಚೇರ್ಮನ್ ಉಮೇಶ್ ಕುಮಾರ್ ಶೆಟ್ಟಿ , ಮುಲ್ಕಿ ಸುಂದರಾಮ ಶೆಟ್ಟಿ ಟ್ರಸ್ಟ್ ನ ಟ್ರಸ್ಟಿ ಸುಕುಮಾರ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಉಮೇಶ್ ಕುಮಾರ್ ಶೆಟ್ಟಿ,ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಉಪಾಧ್ಯಕ್ಷ ಜೀವನ್ ಕೆ ಶೆಟ್ಟಿ, ಕಾರ್ಯದರ್ಶಿ ಸಾಯಿನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ಶರತ್ ಶೆಟ್ಟಿ, ಕೋಶಾಧಿಕಾರಿ ಸ್ವರಾಜ್ ಶೆಟ್ಟಿ ಐಕಳ, ಯುವ ವಿಭಾಗದ ಸಂಚಾಲಕ ದಾಮೋದರ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ರೋಹಿಣಿ ಶೆಟ್ಟಿ, ಪ್ರಚಾರ ವಿಭಾಗದ ನಿಶಾಂತ್ ಶೆಟ್ಟಿ ಕಿಲೆಂಜೂರು ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬಂಟರ ಸಂಘ ಬೆಂಗಳೂರು ಹಾಗೂ ಜಾಗತಿಕ ಬಂಟರ ಸಂಘದ ಒಕ್ಕೂಟ ಮಂಗಳೂರು ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ, ಮುಲ್ಕಿ ಸುಂದರಾಮ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಬಪ್ಪನಾಡು ವಾಗ್ದೇವಿ ದಾಸಪ್ಪ ಶೆಟ್ಟಿ ಚಾರಿಟೇಬಲ್p ಟ್ರಸ್ಟ್ , ಕುಬೆವೂರು ಶಾಂತ ಸಂಜೀವ ಭಂಡಾರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದ ಸಾಧಕರಾದ ಹರೀಶ್ ಶೆಟ್ಟಿ ತಂಗಾಳಿ ಪಂಜಿನಡ್ಕ (ಕೃಷಿ ಕ್ಷೇತ್ರ), ಮೇಘಶ್ರೀ ಶೆಟ್ಟಿ ಕೊಡೆತ್ತೂರು(ಅಂತರಾಷ್ಟ್ರೀಯ ಯೋಗ ಸಾಧಕಿ), ಪ್ರತೀಕ್ಷಾಶೆಟ್ಟಿ ಪಂಜ ಮೊಗಪಾಡಿ (ಶಿಕ್ಷಣ ಕ್ಷೇತ್ರ), ದೀಪಾ ಎಂ ಹೆಗ್ಡೆ, ಚರಿಷ್ಮಾ ಶೆಟ್ಟಿ ಬಪ್ಪನಾಡು ಗುತ್ತು,(ಡಾಕ್ಟರೇಟ್ ಪದವಿ), ತಸ್ಮಯಿ ಎಂ. ಶೆಟ್ಟಿ ಮಿತ್ತಬೈಲುಗುತ್ತು (ರಾಷ್ಟ್ರೀಯ ಮಟ್ಟದ ಸ್ಕೇಟರ್) ರವರನ್ನು ಗೌರವಿಸಲಾಯಿತು.
ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ಡಾ.ಸುಧಾರಾಣಿ ನಿರೂಪಿಸಿದರು.

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!