ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರನ್ನು ವರ್ಗಾವಣೆಗೊಳಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರನ್ನು ನಿಯೋಜಿಸಲಾಗಿದೆ. ವಿದ್ಯಾಕುಮಾರಿಯವರನ್ನು ತಕ್ಷಣದಿಂದ ಜಾರಿಯಾಗುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲು ಆದೇಶಿಸಲಾಗಿದೆ. 2014 ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ವಿದ್ಯಾಕುಮಾರಿ ಮೂಲತಃ ಉಳ್ಳಾಲದ ಪಾವೂರು ಗ್ರಾಮದವರು. ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.



