ಜನ ಮನದ ನಾಡಿ ಮಿಡಿತ

Advertisement

ಮಲ್ಪೆ: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ..!!

 ಅಪ್ರಾಪ್ತ ಪ್ರಾಯದ ಇರ್ವರು ಬಾಲಕಿಯರನ್ನು ರಕ್ಷಿಸಿರುವ ಘಟನೆ ಮಲ್ಪೆ ಬೀಚಿನಲ್ಲಿ ಶುಕ್ರವಾರ ನಡೆದಿದೆ. ರಕ್ಷಿಸಲ್ಪಟ್ಟಿರುವ ಮಕ್ಕಳು ಹಾವೇರಿಯವರೆಂದು ತಿಳಿದುಬಂದಿದೆ. ವಿದ್ಯಾಭ್ಯಾಸ ಮುಂದುವರಿಸುವ ಆಸಕ್ತಿ ಹೊಂದಿದ್ದೇವೆ, ಪೋಷಕರಿಲ್ಲದೆ ಅಸಹಾಯಕರಾದೆವು. ಕಲಿಯುವ ಉದ್ದೇಶಕ್ಕಾಗಿ ಹಣ ಕ್ರೋಢೀಕರಿಸಲು, ಹಾವೇರಿಯಿಂದ ಉಡುಪಿಗೆ ಭಿಕ್ಷೆಯಾಚಿಸಲು ಬಂದಿರುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ.

 

ಬೀಚಿನಲ್ಲಿ ವಿಹರಿಸುತ್ತಿದ್ದ ಇರ್ವರು ಬಾಲಕಿಯರ ಚಲನವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬೀಚ್ ಗಸ್ತು ಸಿಬ್ಬಂದಿ ಸುರೇಶ್ ಅಂಚನ್ ಅವರಿಗೆ, ಬಾಲಕಿಯರು ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. ತಕ್ಷಣ ಅವರು ಅಪ್ರಾಪ್ತ ಬಾಲಕಿಯರ ರಕ್ಷಣೆಗೈಯಲು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಒಳಕಾಡುವರು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕಕ್ಕೆ ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.

ನಂತರ ನಗರ ಮಹಿಳಾ ಪೋಲಿಸ್ ಠಾಣೆಯ ಪಿ.ಎಸ್.ಐ ಪ್ರೇಮನ್ ಗೌಡ ಪಾಟೀಲ್, ಕಾನ್ಸ್ಟೇಬಲ್ ಮಹದೇವ್ ಅವರೊಂದಿಗೆ ಒಳಕಾಡುವರು ಬೀಚಿಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ. ತರುವಾಯ ಕಲ್ಯಾಣ ಸಮಿತಿಯ ಆದೇಶದಂತೆ ರಕ್ಷಿಸಲ್ಪಟ್ಟ ಅಪ್ರಾಪ್ತ ಮಕ್ಕಳನ್ನು ನಿಟ್ಟೂರಿನ ಬಾಲಕಿಯರ ಬಾಲಭವನದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಈ ಸಂದರ್ಭ ಮಕ್ಕಳ ರಕ್ಷಣಾ ಘಟಕದ ಮಹೇಶ್ ಇದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!