ಬಿಗ್‌ಬಾಸ್ ಕನ್ನಡ ವೇದಿಕೆ ಮೇಲೆ ಕಿಚ್ಚ ಸುದೀಪ್ ಅದ್ಭುತ ಮಾತುಗಳನ್ನು ಕೇಳಿದ್ದ ಅಭಿಮಾನಿಗಳು ಖುಷಿ ಪಟ್ಟಿದ್ದರು. ಆದರೆ, ಈ ಖುಷಿಯಲ್ಲಿಯೇ ನೋವಿನ ಸುದ್ದಿ ಕೇಳಬೇಕಾಗಿದೆ. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುದೀಪ್ ತಾಯಿ ಸರೋಜಾ ಸುದೀಪ್ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರನ್ನು ಚಿಕಿತ್ಸೆಗಾಗಿ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾದಗೆ ಇಂದು (ಅಕ್ಟೋಬರ್ 20) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಇಂದು ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ಪಾರ್ಥೀವ ಶರೀರವನ್ನು ಜೆಪಿ ನಗರದ ಮನೆಗೆ ಕರೆದುಕೊಂಡು ಬರಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.



