ಜನ ಮನದ ನಾಡಿ ಮಿಡಿತ

Advertisement

ಯಕ್ಷಗಾನ ‘ಹಾಸ್ಯರಾಜ’ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಬಂಟ್ವಾಳ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತೆಂಕುತಿಟ್ಟಿನ ಪ್ರಸಿದ್ದ ಹಾಸ್ಯ ಗಾರರಾದ ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (65) ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರು ಪತ್ನಿ ,ಪುತ್ರ,ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಅವರು ಪ್ರಸ್ತುತ ಜಿಲ್ಲೆಯ ಪ್ರಸಿದ್ಧ ಮೇಳವಾದ ಹನುಮಗಿರಿ ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಬಂಟ್ವಾಳದಲ್ಲಿ 1957, ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ ಅವರ ಪುತ್ರರಾಗಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಬೋರ್ಡ್ ಶಾಲೆ)ಯಲ್ಲಿ ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನೂ ಮಾಡಿದ್ದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು. ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು.ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ.

ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಯಲ್ಲಿ ಬಂದು ಇಳಿದ ತಂಡದಲ್ಲಿದ್ದ ಬಂಟ್ವಾಳರು *ಇಂದು ಮುಂಜಾನೆ ನಾಲ್ಕು ಗಂಟೆಗೆ ತೀವ್ರತರವಾದ ಹೃದಯ ಸ್ತಂಭನವಾದಾಗ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನರಾದರು. ಈಗ ಸ್ಥಳೀಯ ಆಸ್ಪತ್ರೆಯಲ್ಲಿರುವ ಮೃತ ದೇಹ ಆರ್.ಕೆ ಭಟ್ಟರ ಮನೆಗೆ ಅಂತಿಮ ದರ್ಶನಕ್ಕೆ ಹೋಗಿ ಆಮೇಲೆ ಆಂಬುಲೆನ್ಸ್ ಮೂಲಕ ಊರಿಗೆ ಸಾಗಲಿದೆ ಎಂದು ಭಾಗವತರಾದ ಗಿರೀಶ್ ರೈ ಕಕ್ಕೆ ಪದವು ತಿಳಿಸಿದ್ದಾರೆ

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!