ಜನ ಮನದ ನಾಡಿ ಮಿಡಿತ

Advertisement

Rain Alert: ಇಂದಿನಿಂದ ಭಾರೀ ಮಳೆಯ ಎಚ್ಚರಿಕೆ! ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದ ಅನೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಭಾರತದ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್ ಎದ್ದಿರುವುದರಿಂದ ಸದ್ಯಕ್ಕೆ ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಇಂದು ಸೇರಿದಂತೆ ಮುಂದಿನ ಕೆಲನ ದಿನಗಳ ಕಾಲ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಿಂಗಾರು ಮಳೆ ಆರಂಭವಾದ ಕೂಡಲೇ ಉತ್ತರ ಭಾರತದಲ್ಲಿ ಚಳಿ ಹೆಚ್ಚಾಗಲಾರಂಭಿಸಿದ್ದು, ದಕ್ಷಿಣ ಭಾರತದ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಸೈಕ್ಲೋನ್ ಆರ್ಭಟ ಜೋರಾಗಿದ್ದು, ಬಂಗಾಳದ ಆಕಾಶದಲ್ಲಿ ಚಂಡಮಾರುತದ ಲಕ್ಷಣಗಳು ಕಾಣುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಈ ಚಂಡಮಾರುತವು ಪೂರ್ವ ಮಧ್ಯ ಬಂಗಾಳ ಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಬಳಿ ಕಡಿಮೆ ಒತ್ತಡವಾಗಿ ಬದಲಾಗುತ್ತದೆ.

 

 

ಇದರ ಪರಿಣಾಮ ಅಕ್ಟೋಬರ್ 22 ಮಂಗಳವಾರದ ತನಕ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.ಮತ್ತೊಂದೆಡೆ ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಗೋವಾ ಮತ್ತು ಕೊಂಕಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ವಿಜಯನಗರ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮತ್ತೊಂದೆಡೆ ಮುಂಜಾನೆಯೇ ಭಾರೀ ಮಳೆ ಸುರಿಯುತ್ತಿದ್ದರಿಂದ ಬೆಂಗಳೂರು ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.ಇನ್ನು, ಅಕ್ಟೋಬರ್ 21 ರಿಂದ 25 ರವರೆಗೆ, ಕರ್ನಾಟಕ, ತಮಿಳುನಾಡು, ಕೇರಳ, ಒಡಿಶಾ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಂತಹ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಹೆಚ್ಚುವರಿ ಎಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಆರೆಂಜ್ ಅಲರ್ಟ್ ಮುಂದುವರಿಯಲಿದೆ.

 

 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

error: Content is protected !!