ಜನ ಮನದ ನಾಡಿ ಮಿಡಿತ

Advertisement

ವಿಧಾನ ಪರಿಷತ್ ಉಪ ಚುನಾವಣೆ: ಅ.24ರಂದು ಮತ ಎಣಿಕೆ; ನಿಷೇಧಾಜ್ಞೆ

 

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರ ವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಗ್ಗೆ 5 ಯಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಐದ ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದು, ಮೆರವಣಿಗೆ ಅಥವಾ ಸಭೆ/ಸಮಾರಂಭ ಮಾಡುವು ದನ್ನು ನಿಷೇಧಿಸಲಾಗಿದೆ.

ಮತ ಎಣಿಕೆ ಕೇಂದ್ರದ ಆಭರಣದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ಪಾದಚಾರಿ ವಲಯ ಎಂದು ಗುರುತಿಸಲಾ ಗಿದೆ. ಈ ಸಂದರ್ಭ ಯಾವುದೇ ವಾಹನಗಳಿಗೆ ಪ್ರವೇಶ ಮತ್ತು ಪಾರ್ಕಿಂಗ್ ಮಾಡಲು ಅವಕಾಶ ಇರುವುದಿಲ್ಲ. ಮತ ಎಣಿಕೆ ಕೇಂದ್ರದ 200 ಮೀಟರ್ ಅಂತರದಲ್ಲಿ ಮೊಬೈಲ್ ಪೋನ್, ಕಾರ್ಡ್‌ಲೆಸ್ ಫೋನ್ ಅಥವಾ ಇನ್ನಿತರ ಇಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವು ದನ್ನು ನಿಷೇಧಿಸಲಾಗಿದೆ.

ಚುನಾವಣೆಯ ಮತ ಎಣಿಕೆ ಫಲಿತಾಂಶದ ಸಮಯದಲ್ಲಿ ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿದೆ. ಈ ಅವಧಿ ಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಮಾರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಯಾವುದೇ ಕ್ಷಾರಕ ಅಥವಾ ಸ್ಫೋಟ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ.

ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಕ್ಷಿಪಣಿಗಳ ಅಥವಾ ಕ್ಷಿಪಣಿಯಾಗಿ ಉಪಯೋಗಿ ಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಗ್ರಿಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕ ಅಥವಾ ಉದ್ರಿಕ ಕಾರ್ಯ ಹಾಡುಗಳು ಕೂಗಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋ ವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿ ಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವ ಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂ ತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶ ಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವುದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿ ಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಹಾಗೂ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಈ ಆದೇಶವು ಚುನಾವಣಾ ಕಾರ್ಯನಿರತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಅಧಿಕಾರಿ ಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!