ಜನ ಮನದ ನಾಡಿ ಮಿಡಿತ

Advertisement

ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ..!!: 11ರ ಹರೆಯದ ವಿದ್ಯಾರ್ಥಿನಿ ಸಾವು..!

ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ  ಸಂಭವಿಸಿದೆ.

ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಪಿಕಪ್‌ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ. ರಿಕ್ಷಾದಲ್ಲಿದ್ದ ಇತರೆ ನಾಲ್ವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ದೇರಳಕಟ್ಟೆ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಜೆ ಸಾರಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!