ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾ| ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ `ಮಂಗಳೂರು ಕಂಬಳ’ದ ಪೂರ್ವಭಾವಿ ಸಭೆ

ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ  ಡಿಸೆಂಬರ್ 28 , 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು  ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.

ಸಭೆಯನ್ನು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷರು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವ

ರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತಿದ್ದು ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಪೂರ್ವಭಾವಿ ಸಭೆಯಲ್ಲಿ ಉಪಸ್ತಿತರಿದ್ದು ಮಾತನಾಡಿದ ಮಾಜಿ ಸಚಿವರಾದ ಬಿ. ನಾಗರಾಜ ಶೆಟ್ಟಿಯವರು ಕಂಬಳ ಈ ಮಣ್ಣಿನ ಅಸ್ಮಿತೆ, ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಮಂಗಳೂರು ಕಂಬಳ ಮೇಲ್ಪಂಕ್ತಿಯಾಗಿದೆ ಎಂದರು.ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ ಮಾತನಾಡಿ ಮಂಗಳೂರು ನಗರದಲ್ಲಿ ನಡೆಯುವ ಕಂಬಳ ಜನ ಆಕರ್ಷಣೀಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರೆಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಸರ್ವ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗರೋಡಿ , ಮಹಾನಗರ ಪಾಲಿಕೆ ಸದಸ್ಯರು ಹಾಗೂ ಮಂಗಳೂರು ಕಂಬಳ ಸಮಿತಿ ಉಪಾಧ್ಯಕ್ಷರಾದ ಕಿರಣ್ ಕುಮಾರ್, ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿಯ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿ, ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು, ಕಾರ್ಯದರ್ಶಿ ಮನ್ಮತ್ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!