ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಪುತ್ತೂರು ತಾಲೂಕಿನ ಗೆಜ್ಜೆಗಿರಿ ನಂದನ ಬಿತ್ತ್ಲ್ ಕ್ಷೇತ್ರದ ಆನುವಂಶಿಕ ಮೊಕ್ತೇಸರರಾದ,ಗೆಜ್ಜೆಗಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿಗೆ ಒಲಿದ ಅಕಾಡಮಿ ಪ್ರಶಸ್ತಿಯ ಗೌರವ

ಪುತ್ತೂರು: ಪುತ್ತೂರು ತಾಲೂಕಿನ ಗೆಜ್ಜೆಗಿರಿ ನಂದನ ಬಿತ್ತ್ಲ್ ಕ್ಷೇತ್ರದ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ(೭೭) ಅವರು ಕರ್ನಾಟಕ ಸರ್ಕಾರದ ಜಾನಪದ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್ಯದ ೩೦ ಜಿಲ್ಲೆಗಳಿಂದ ತಲಾ ಒಬ್ಬರನ್ನು ಆರಿಸಿ ೨೦೨೩ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಘೋಷಿಸಲಾಗಿದ್ದು, ಲೀಲಾವತಿ ಪೂಜಾರಿ ಅವರು ಕಳೆದ ೫೫ ವರ್ಷಗಳಿಂದ ನಾಟಿ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ತಮ್ಮ ೧೫ನೇ ವರ್ಷ ವಯಸ್ಸಿನಲ್ಲಿಯೇ ನಾಟಿ ಔಷಧ ವಿದ್ಯೆಯನ್ನು ಕಲಿತುಕೊಂಡಿದ್ದ ಲೀಲಾವತಿ ಪೂಜಾರಿ ಅವರು ಕಳೆದ ೫೫ ವರ್ಷಗಳಲ್ಲಿ ಸಾವಿರಾರು ಮಂದಿಯ ರೋಗಗಳನ್ನು ಗಿಡಮೂಲಿಕೆ ಔಷಧಿಯ ಮೂಲಕ ಗುಣಪಡಿಸಿದ್ದಾರೆ. ಸರ್ಪಸುತ್ತುö, ಕೆಂಪು, ಬೆಸುರ್ಪು, ದೃಷ್ಟಿ, ಸೋರಿಯಾಸಿಸ್ ಚರ್ಮರೋಗ, ಮಕ್ಕಳ ಚಿಕಿತ್ಸೆö, ಸಂಧಿವಾತ ಇತ್ಯಾದಿ ಸಮಸ್ಯೆಗಳನ್ನು ನಾಟಿ ಔಷಧದ ಮೂಲಕ ಗುಣಪಡಿಸುತ್ತಿದ್ದರು. ಪಾರಂಪರಿಕ ಮಂತ್ರ ವಿದ್ಯೆಯನ್ನು ಹೊಂದಿರುವ ಲೀಲಾವತಿ ಅವರು ದೃಷ್ಟಿದೋಷ ನಿವಾರಣೆಗೆ ನೂಲು ಕಟ್ಟುವುದರಲ್ಲಿ ಮತ್ತು ಬೆಂಕಿ ಅವಘಡದಿಂದಾಗುವ ಉರಿ ತೆಗೆಯುವುದರಲ್ಲಿ ಎತ್ತಿದ ಕೈಯಾಗಿದ್ದರು. ಗೆಜ್ಜೆಗಿರಿ ಕ್ಷೇತ್ರದ ಆದಿ ದೈವ ಧೂಮಾವತಿ ಮತ್ತು ಇಲ್ಲಿ ಕಾರಣಿಕ ಮಾತೆ ದೇಯಿ ಬೈದ್ಯೆತಿಯ ಸ್ಮರಣೆಯಲ್ಲಿ ಅವರು ಔಷಧ ನೀಡುತ್ತಿದ್ದಾರೆ. ತಮ್ಮ ಪುತ್ರ, ಗೆಜ್ಜೆಗಿರಿ ಕ್ಷೇತ್ರದ ಆನುವಂಶಿಕ ಮೊಕ್ತೇಸರರಾದ ಶ್ರೀಧರ ಪೂಜಾರಿ ಅವರ ಜತೆ ಸೇರಿಕೊಂಡು ಕೇಶ ತೈಲ, ನೋವಿನ ಎಣ್ಣೆಯನ್ನೂ ತಯಾರಿಸುತ್ತಿದ್ದಾರೆ.

೫೦೦ ವರ್ಷಗಳ ಹಿಂದೆ ಬದುಕಿದ ಕೋಟಿ ಚೆನ್ನಯರ ತಾಯಿಯಾದ ದೇಯಿ ಬೈದ್ಯೆತಿ ನಾಟಿ ವೈದ್ಯೆಯಾಗಿದ್ದರು. ೬೫ ವರ್ಷಗಳ ಹಿಂದೆ ಇದೇ ಗೆಜ್ಜೆಗಿರಿಯಲ್ಲಿನ ಕುಟುಂಬಕ್ಕೆ ಸೊಸೆಯಾಗಿ ಬಂದ ಲೀಲಾವತಿ ಪೂಜಾರಿ ಅವರು, ತಮ್ಮ ಗಂಡ ದಿ.ದೂಮಣ್ಣ ಪೂಜಾರಿ ಮತ್ತು ಅತ್ತೆ ದಿ.ಮದನು ಪೂಜಾರಿ ಅವರಿಂದ ನಾಟಿ ವೈದ್ಯಕೀಯದ ವಿದ್ಯೆ ಕಲಿತುಕೊಂಡು ಈ ನಾಟಿ ವೈದ್ಯಕೀಯ ಪರಂಪರೆಯನ್ನು ಮುಂದುವರಿಸಿಕೊAಡು ಬಂದಿದ್ದಾರೆ.

ಮೂಲ್ಕಿ ಬಿಲ್ಲವ ಸಂಘದಲ್ಲಿ ನಡೆದ ಮಹಿಳಾ ಸಮಾಗಮ, ಮಂಗಳೂರಿನಲ್ಲಿ ನಡೆದ ಬಿಲ್ಲವ ಮಹಿಳಾ ಸಮಾವೇಶ ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ನಾನಾ ಕಡೆ ಲೀಲಾವತಿ ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ. ಗೆಜ್ಜೆಗಿರಿಯಲ್ಲಿ ತನ್ನ ಪುತ್ರನಾದ ಶ್ರೀಧರ ಪೂಜಾರಿ ಅವರೊಂದಿಗೆ ವಾಸ್ತವ್ಯವಿರುವ ಲೀಲಾವತಿ ಪೂಜಾರಿ ಅವರು ಪುತ್ರರಾದ ಪದ್ಮನಾಭ ಸುವರ್ಣ, ರವೀಂದ್ರ ಸುವರ್ಣ ಹಾಗೂ ಪುತ್ರಿ ಸವಿತಾ ಮಹಾಬಲ ಪೂಜಾರಿ ಅವರನ್ನು ಹೊಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!