ಜನ ಮನದ ನಾಡಿ ಮಿಡಿತ

Advertisement

ತಾ.ಪಂ.ನಲ್ಲಿ ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ

ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್‌ ಮಿಷನ್‌ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು ದುರ್ಬಳಕೆ ಮಾಡದೇ ಮಿತವಾಗಿ ಬಳಸಿ ಪ್ರತೀ ಮನೆಗಳಿಗೆ ತಲುಪುವಂತೆ ಹಾಗೂ ದುರ್ಬಳಕೆ ಮಾಡುವವರ ಮೇಲೆ ಗ್ರಾಮ ಪಂಚಾಯತ್‌ಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ ಭಂಡಾರಿ ಹೇಳಿದರು.


ಅವರು ನ.7 ರಂದು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಜಲಜೀವನ್‌ ಮಿಷನ್‌ ಯೋಜನೆಯಡಿ ಐಇಸಿ/ಹೆಚ್‌.ಆರ್‌.ಡಿ ಚಟುವಟಿಕೆಗಳನ್ನು ನಡೆಸಲು ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಒಂದು ದಿನದ ಸಾಮರ್ಥ್ಯಾಭಿವೃದ್ಧಿ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿ, ಪ್ರತಿ ಮನೆಗೆ ಅಗತ್ಯ ಕುಡಿಯುವ ನೀರನ್ನು ಪೂರೈಸುವುದು ಹಾಗೂ ನಳ್ಳಿ ನೀರಿನ ಮಾಸಿಕ ಬಿಲ್ಲು ವಸೂಲಾತಿಯನ್ನು ಕಡ್ಡಾಯವಾಗಿ ನಿರ್ವಹಿಸುವ ಜವಾಬ್ದಾರಿ ಈ ಸಮಿತಿಯದ್ದಾಗಿದೆ ಎಂದು ತಿಳಿಸಿದರು.
ತಾ.ಪಂ. ಸಹಾಯಕ ನಿರ್ದೇಶಕರು (ಗ್ರಾ.ಉ.) ಶೈಲಜಾ ಎ ಇಲಾಖಾ ಮಾಹಿತಿಯನ್ನು ನೀಡಿದರು.
ಜಲಜೀವನ್‌ ಮಿಷನ್‌ ಜಿಲ್ಲಾ ಸಂಯೋಜಕರಾದ ಶಿವರಾಮ್‌, ಸುರೇಶ್‌, ಚರಣ್‌, ಅಶ್ವಿತ ತರಬೇತಿ ನೀಡಿದರು.
ಈ ಸಂದರ್ಭ ಬಲ್ನಾಡು ಗ್ರಾ.ಪಂ. ಅಧ್ಯಕ್ಷೆ ಪರಮೇಶ್ವರಿ, ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ, ಪಾಣಾಜೆ ಗ್ರಾ.ಪಂ. ಅಧ್ಯಕ್ಷೆ ಮೈಮೂನತ್ತುಲ್‌ ಮೆಹ್ರಾ, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆಯ ಕಿರಿಯ ಅಭಿಯಂತರರ ಕುಶ ಕುಮಾರ್‌ ವೇದಿಕೆಯಲ್ಲಿದ್ದರು.
ತಾ.ಪಂ. ವಿಷಯ ನಿರ್ವಾಹಕರಾದ ಸುರೇಶ್‌ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!