ಜನ ಮನದ ನಾಡಿ ಮಿಡಿತ

Advertisement

ಹಗರಣಗಳಿಂದಲೇ ಕುಖ್ಯಾತಿ ಪಡೆದ ರಾಜ್ಯ ಸರಕಾರದ ಆಡಳಿತವನ್ನು ಧಿಕ್ಕರಿಸಿ ಮತದಾರರು ಬಿಜೆಪಿಯ ಕೈ ಹಿಡಿಯಲಿದ್ದಾರೆ: ವಿಧಾನ ಪರಿಷತ್ ಸದಸ್ಯ ಕಿಶೋರ್

ಹಗರಣಗಳಿಂದಲೇ ಕುಖ್ಯಾತಿ ಪಡೆದ ರಾಜ್ಯ ಸರಕಾರದ ಆಡಳಿತವನ್ನು ಧಿಕ್ಕರಿಸಿ ಉಪ‌ಚುನಾವಣೆಯಲ್ಲಿ ಮತದಾರರು ಬಿಜೆಪಿಯ ಕೈ ಹಿಡಿಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ಬಂಗಾರು ಹನುಮಂತ ಅವರ ಪರವಾಗಿ ವಡ್ಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಸರಕಾರವು ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ವಿವಾದಗಳೇ ಬಂಡವಾಳವಾಗಿದೆ ಹೊರತು ಜನರ ಸಂಕಷ್ಟ ಕೇಳುವವರಿಲ್ಲದಂತಾಗಿದೆ. ಗ್ಯಾರಂಟಿ ಯೋಜನೆಗಳು ಮೂಲೆ ಸೇರುತ್ತಿರುವಂತೆ ರಾಜ್ಯ ಸರಕಾರವೂ ಕೂಡ ಮೂಲೆ ಗುಂಪಾಗುವ ದಿನ ದೂರವಿಲ್ಲ ಎಂದು ಹೇಳಿದರು.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವು ಶತ‌ ಸಿದ್ಧ. ಕಾಂಗ್ರೆಸಿನ ಷಡ್ಯಂತ್ರಗಳಿಗೆ ಮತದಾರ ಮರುಳಾಗದೆ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರ ಕುರಿತು ಕ್ಷೇತ್ರದ ಜನರಲ್ಲಿ ಉತ್ತಮ ಅಭಿಪ್ರಾಯ ವ್ಯಕ್ತವಾಗುತಿದ್ದು ಬಿಜೆಪಿ ಗೆಲುವಿನ ನಗೆ ಬೀರಲಿದೆ ಎಂದು ಕಿಶೋರ್ ಕುಮಾರ್ ಪುತ್ತೂರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!