ಜನ ಮನದ ನಾಡಿ ಮಿಡಿತ

Advertisement

ಸಂಪಾಜೆ ಯಕ್ಷೋತ್ಸವ ೨೦೨೪ ಹಾಗೂ ಬ್ರಹ್ಮೈಕ್ಯ ಶ್ರೀ ಶ್ರೀ ಕೇಶಾವನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಮಂಗಳೂರು:ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಸಂಪಾಜೆ ವತಿಯಿಂದಸಂಪಾಜೆ ಯಕ್ಷೋತ್ಸವ ೨೦೨೪ ಹಾಗೂ ಬ್ರಹ್ಮೈಕ್ಯ ಶ್ರೀ ಶ್ರೀ ಕೇಶಾವನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಸರಗೋಡು ಜಿಲ್ಲೆಯ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಜೀ ನೆರವೇರಿಸಿದರು.ಸುಬ್ರಹ್ಮಣ್ಯ ನರಸಿಂಹ ಸಂಪುಟ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು..ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಯಿತು.
ಶ್ರೀ ಕೇಶವಾನಂದ ಭಾರತೀ ರಾಷ್ಟ್ರೀಯ ನ್ಯಾಯ ಪ್ರಶಸ್ತಿ ಯನ್ನು ಸುಪ್ರೀಂ‌ ಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ಜಸ್ಟಿಸ್ ಎಸ್ ರವೀಂದ್ರ ಭಟ್ ಅವರಿಗೆ,ಕೇಶಾವನಂದ ಭಾರತೀ ಶೈಕ್ಷಣಿಕ ಪ್ರಶಸ್ತಿಯನ್ನು ಎಕ್ಸ್ ಪರ್ಟ್ ಸಮೂಹ ಸಂಸ್ಥೆಯ ನರೇಂದ್ರ ನಾಯಕ್,ಸಂಗೀತ ಪ್ರಶಸ್ತಿಯನ್ನು ವಿಧೂಷಿ ಎಂ.ಎಸ್ ಶೀಲಾ ಅವರಿಗೆ,ಯಕ್ಷಗಾನಾಧ್ವರ್ಯ ಪ್ರಶಸ್ತಿ ಯನ್ನು ಮಂಟಪ ಪ್ರಭಾಕರ ಉಪಾಧ್ಯ ,ವೈದಿಕ ಪ್ರಶಸ್ತಿಯನ್ನು ರಾಜಗುರು ಬಿ‌ಎಸ್ ದ್ವಾರಾಕಾನಾಥ್ ಅವರಿಗೆ, ಕಲಾಪೋಷಕ ಪ್ರಶಸ್ತಿ ಯನ್ನು ಸರವು ಕೃಷ್ಣ ಭಟ್,ಹಾಗೂ ಪ್ರಸಿದ್ಧ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿ ಅವರಿಗೆ ಯಕ್ಷೋತ್ಸವ ಸನ್ಮಾನವನ್ನು ನೀಡಿ ಗೌರವಿಸಲಾಗಿದೆ..

ಸಂಪಾಜೆ ಯಕ್ಷೋತ್ಸವ ದ ಪ್ರಯುಕ್ತ ಸತತ ಇಪ್ತತ್ತನಾಲ್ಕು ಗಂಟೆಗಳ ಕಾಲ ಜಿಲ್ಲೆಯ ಸುಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ವಿವಿಧ ಪ್ರಸಂಗಗಳ ಯಕ್ಷಗಾನ ಪ್ರದರ್ಶನ ನಡೆದಿದೆ.ಸಾವಿರಾರು ಸಂಖ್ಯೆ ಯನ್ನು ಯಕ್ಷಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!