ಕಾರ್ಕಳದಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಕಾರ್ಕಳ ಪೇಟೆ ಮಾರ್ಕೇಟ್ ರಸ್ತೆಯಲ್ಲಿರುವ ಕಚೇರಿಗೆ ಕರ್ತವ್ಯ ನಿರ್ವಹಣೆಗೆ ಎಂದು ಬಂದಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಶುಕ್ರವಾರ ವರದಿಯಾಗಿದೆ. ಸ್ಥಳೀಯ ನಿವಾಸಿ ಪ್ರಮೀಳ ದೇವಾಡಿಗ (32) ವಿವಾಹಿತ ಮಹಿಳೆಯಾಗಿರುವ ಆಕೆ ಸಣ್ಣ ಮಗುವನ್ನು ಹೊಂದಿದ್ದು ಸ್ಥಳೀಯ ಸಹಕಾರಿ ಸಂಘದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತಿದ್ದರು. ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾದ ಸಂದರ್ಭ ಈ ವಿಚಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಪ್ರಕರಣ ನಗರ ಠಾಣೆಯಲ್ಲಿ ದಾಖಲಾಗಿದೆ.



