ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಬ್ರೇಕ್ ಫೈಲ್ ಆಗಿ ಪಲ್ಟಿಯಾದ ಘಟನೆ ವಿಟ್ಲ ದ ಮುಚ್ಚಿರಪದವು ಎಂಬಲ್ಲಿ ನಡೆದಿದೆ.

ಘಟನೆಯಿಂದ ವಾಹನ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನ ತಲೆಗೆ ಗಾಯವಾಗಿದ್ದು ಹಲವು ಮಕ್ಕಳಿಗೂ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಪೆರುವಾಯಿ ಮಿತ್ತಮೂಲೆ ಎಂಬಲ್ಲಿದ್ದ ಮಕ್ಕಳನ್ನು ವಿಟ್ಲದ ಶಾಲೆಗೆ ಕಳುಹಿಸಲು ಬಸ್ಸಿಗೆ ಹತ್ತಿಸಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕ ಮುಳಿಯ ರಾಮಣ್ಣ ಅವರ ತಲೆಗೆ ಗಾಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.



