ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಟೀಚರ್ ಬಾವಿಗೆ ಹಾರಿ ಆತ್ಮಹತ್ಯೆ..!

ಉಡುಪಿ: ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಟೀಚರ್ ಒಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ನಡೆದಿದೆ.


ಮಿಯ್ಯಾರು ಅಂಗನವಾಡಿ ಕಾರ್ಯಕರ್ತೆ ಸೌಮ್ಯ (40) ಆತ್ಮಹತ್ಯೆ ಮಾಡಿಕೊಂಡವರು. ಇವರು ಇಂದು ಬೆಳಿಗ್ಗೆ ಮಿಯ್ಯಾರಿನ ತನ್ನ ಮನೆಯ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 20 ವರ್ಷಗಳಿಂದ ಮಿಯ್ಯಾರು ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸಿದ್ದ ಅವರು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಸಕ್ರಿಯರಾಗಿದ್ದರು.
ಸೌಮ್ಯ ಅವರ ಪತಿ ಸಂತೋಷ್‌ ಪೂಜಾರಿ ಅವರು ಎರಡು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಆ ಬಳಿಕ ಸೌಮ್ಯ ಅವರು ತೀವ್ರ ಮನನೊಂದಿದ್ದು, ಇದರಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಇದೇ ಕಾರಣದಿಂದ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದಂಪತಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!