ಜನ ಮನದ ನಾಡಿ ಮಿಡಿತ

Advertisement

ಕಾಂತಾರ ಚಿತ್ರದ ನೃತ್ಯ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ; ಹಲವು ಕಲಾವಿದರಿಗೆ ಗಾಯ

ಉಡುಪಿ: ಕಾಂತಾರ ಸಿನೆಮಾ ಚಿತ್ರೀಕರಣ ಮುಗಿಸಿ ಕೊಲ್ಲೂರು ವಸತಿಗೃಹಕ್ಕೆ ವಾಪಾಸಾಗುತ್ತಿದ್ದ ವೇಳೆ ಬಸ್ ಪಲ್ಟಿಯಾಗಿ ಹಲವು ಕಲಾವಿದರು ಗಾಯಗೊಂಡಿರುವ ಘಟನೆ ಕೊಲ್ಲೂರು ಸಮೀಪದ ಆನೆಜರಿ ಎದುರು ಭಾನುವಾರ ರಾತ್ರಿ ಸಂಭವಿಸಿದೆ.

ಮುದೂರಿನಲ್ಲಿ ಕಾಂತಾರ ಸಿನೆಮಾ ನೃತ್ಯ ಚಿತ್ರೀಕರಣ ಮುಗಿಸಿ ಸುಮಾರು 20ಕ್ಕೂ ಮಿಕ್ಕಿ ಕಿರಿಯ ನೃತ್ಯ ಕಲಾವಿದರು ತಮ್ಮ ವಸತಿಗೃ
ಹಕ್ಕೆ 407 ಬಸ್‌ನಲ್ಲಿ ವಾಪಾಸಾಗಿತ್ತಿದ್ದ ವೇಳೆ ಚಾಲಕ ಎದುರಿಗೆ ಬಂದ ಬೈಕ್ ಅನ್ನು ತಪ್ಪಿಸುವ ಭರದಲ್ಲಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ‌. ಗಾಯಗೊಂಡ ಹಲವು ಕಲಾವಿದರಿಗೆ ಜಡ್ಕಲ್ ಮಹಾಲಕ್ಷ್ಮೀ ಕ್ಲಿನಿಕ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನಿಗೆ ಥಳಿತ: ಆಕ್ರೋಶ
ಚಾಲಕ ಮೊಬೈಲ್ ಬಳಕೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಬಸ್ ಪಲ್ಟಿಯಾದ ಬಳಿಕ ಉಪ್ಪುಂದ ಮೂಲದ ಟೂರಿಸ್ಟ್ ಬಸ್ ಚಾಲಕನಿಗೆ ಕಲಾವಿದರು ಥಳಿಸಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಟೂರಿಸ್ಟ್ ಚಾಲಕ ಸಂಘದ ಸದಸ್ಯರು ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಕೆಲಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!