ಜನ ಮನದ ನಾಡಿ ಮಿಡಿತ

Advertisement

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ತಂದೆ ಸಾವು ಮಗಳಿಗೆ ಗಂಭೀರ ಗಾಯ…!

ಬೇಲೂರು :ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ತಂದೆ ಮೃತಪಟ್ಟು, ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಬೇಲೂರು ತಾಲ್ಲೂಕಿನ, ಕೊರಟಿಗೆರೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಚಿಕ್ಕಮಗಳೂರು ಮೂಲದ, ಬೇಲೂರಿನಲ್ಲಿ ಬಟ್ಟೆ ಅಂಗಡಿ ಹೊಂದಿದ್ದ ದಯಾನಂದ (46) ಮೃತ ವ್ಯಕ್ತಿ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ, ಮಗಳು ನಿಶ್ಮಿತಾ (16) ಗಂಭೀರವಾಗಿ ಗಾಯಗೊಂಡಿದ್ದು ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಚಿಕ್ಕಮಗಳೂರಿಗೆ ತೆರಳಿದ್ದ ದಯಾನಂದ ಅವರು ಇಂದು ಬೆಳಗ್ಗೆ ಮಗಳನ್ನು ಶಾಲೆಗೆ ಬಿಡಲೆಂದು ಚಿಕ್ಕಮಗಳೂರಿನಿಂದ ಬೇಲೂರಿಗೆ ಕಾರಿನಲ್ಲಿ ಬರುತ್ತಿದ್ದರು.

ಕೊರಟಿಗೆರೆಯಲ್ಲಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅಡಿಕೆ ತೋಟಕ್ಕೆ ಉರುಳಿ ತಲೆಕೆಳಗಾಗಿ ಬಿದ್ದಿದ್ದು ದಯಾನಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!