ಜನ ಮನದ ನಾಡಿ ಮಿಡಿತ

Advertisement

ಕುಕ್ಕೆ:ಮೂಲ ಮೃತ್ತಿಕಾ ಪ್ರಸಾದ ವಿತರಣೆ: ಪವಿತ್ರ ಪ್ರಸಾದ ಪಡೆದ ಭಕ್ತರು..!

ಕಡಬ,ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಥಮ ಅಂಗವಾಗಿ ಕಾರ್ತಿಕ ಬಹುಳ ಏಕಾದಶಿಯ ದಿನವಾದ ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯಿಂದ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಅವರು ಮೂಲಮೃತ್ತಿಕೆಯನ್ನು ಸುಮುಹೂರ್ತದಲ್ಲಿ ವಿವಿಧ ವೈಧಿಕ ವಿಧಾನಗಳ ಮೂಲಕ ತೆಗೆದರು. ಆರಂಭದಲ್ಲಿ ಶ್ರೀ ದೇವಳದ ಪುರೋಹಿತರಿಗೆ ಮತ್ತು ಆಡಳಿತ ಮಂಡಳಿಗೆ ಮೂಲಮೃತ್ತಿಕೆ ನೀಡಿದರು. ಬಳಿಕ ಭಕ್ತಾಧಿಗಳಿಗೆ ವಿತರಿಸಿದರು. ಶ್ರದ್ಧಾಭಕ್ತಿಯಿಂದ ಈ ಮಹಾಪ್ರಸಾದವನ್ನು ಭಕ್ತರು ಸ್ವೀಕರಿಸಿದರು.


ಸರದಿ ಸಾಲು:
ಸಹಸ್ರಾರು ಭಕ್ತರು ಬೆಳಗ್ಗೆ ೧೦ ಗಂಟೆಯಿAದಲೇ ಸರತಿ ಸಾಲಿನಲ್ಲಿ ನಿಂತು ಮೃತ್ತಿಕಾ ಪ್ರಸಾದ ಪಡೆದರು. ಹೆಚ್ಚಿನ ಸಂಖ್ಯೆಯಲ್ಲಿ ಊರ ಭಕ್ತಾಧಿಗಳು ಮೃತ್ತಿಕಾ ಪ್ರಸಾದ ಸ್ವೀಕರಿಸಿದರು. ಶ್ರೀದೇವಳದಲ್ಲಿ ಮೂಲಮೃತ್ತಿಕಾ ಪ್ರಸಾದ ತೆಗೆಯಲು ಇದ್ದುದರಿಂದ ಮಧ್ಯಾಹ್ನ ೨ ಗಂಟೆಯ ನಂತರ ಭಕ್ತಾಧಿಗಳಿಗೆ ಶ್ರೀ ದೇವರ ದರುಶನಕ್ಕೆ ಅವಕಾಶ ಮಾಡಲಾಯಿತು.ಏಕಾದಶಿ ದಿನವಾದುದರಿಂದ ಶ್ರೀ ದೇವರ ದರುಶನದ ಬಳಿಕ ಆಯ್ದ ಸೇವೆಗಳನ್ನು ಭಕ್ತರು ನೆರವೇರಿಸಿದರು.


ಈ ಸಂದರ್ಭ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷಿö್ಮಶ ಗಬ್ಲಡ್ಕ, ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಸ್ಟರ್‌ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ,ಪವನ್ ಎಂ.ಡಿ, ಅಚ್ಚುತ ಆಲ್ಕಬೆ, ಸೇರಿದಂತೆ ದೇವಳದ ಸಿಬ್ಬಂದಿಗಳು, ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!