ಜನ ಮನದ ನಾಡಿ ಮಿಡಿತ

Advertisement

ನೈಜೀರಿಯದಲ್ಲಿ ಬೋಟ್ ಮಗುಚಿ 27ಕ್ಕೂ ಹೆಚ್ಚು ಮಂದಿ ಸಾವು, ನೂರಾರು ಮಂದಿ ನಾಪತ್ತೆ..!

ನೈಜೀರಿಯದ ಉತ್ತರ ಭಾಗದಲ್ಲಿ ಸಂಭವಿಸಿದ ಬೋಟ್ ಅಪಘಾತದಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಇನ್ನೂ ಕಾಣೆಯಾಗಿದ್ದಾರೆ. ನೈಜೀರಿಯದ ಕೋಗಿ ರಾಜ್ಯದಿಂದ ಹೊರಟ ಬೋಟ್, ನೈಜರ್ ನದಿಯಲ್ಲಿ ಮುಳುಗಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬೋಟ್‌ನಲ್ಲಿ ಸುಮಾರು 200 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಶುಕ್ರವಾರ ಸಂಜೆ ವೇಳೆಗೆ 27 ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದು, ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ.

 

ಸ್ಥಳೀಯ ಸ್ಕೂಬಾ ತಜ್ಞರು ಮತ್ತು ಸೇನಾಬಲದ ಸಿಬ್ಬಂದಿ ಸೇರಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಕೋಗಿಯ ರಕ್ಷಣಾ ಪ್ರತಿನಿಧಿ ತಿಳಿಸಿದ್ದಾರೆ. ಘಟನೆ ಸಂಭವಿಸಿದ 12 ಗಂಟೆಗೂ ಹೆಚ್ಚಿನ ಸಮಯದಲ್ಲಿ ಯಾವುದೇ ಪ್ರಯಾಣಿಕರನ್ನು ಜೀವಿತಾವಸ್ಥೆಯಲ್ಲಿ ರಕ್ಷಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಗಾಯಾಳುಗಳಲ್ಲಿ ಬಹುಮಟ್ಟಿಗೆ ಮಹಿಳೆಯರೇ ಇದ್ದು, ಮತ್ತು ಅವರಲ್ಲಿ ಕೆಲವರು ಮಾರ್ಕೆಟಿಗೆ ಹೋಗುತ್ತಿದ್ದವರು ಎಂದು ವರದಿಯಾಗಿದೆ.

ಬೋಟ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿರುವುದು ಮತ್ತು ಬೋಟ್ ನಿರ್ವಹಣೆ ಕೊರತೆಯಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ. ಮುಳುಗಿದ ಬೋಟನ್ನು ಹುಡುಕಲು ತಡವಾದ ಕಾರಣ ಸಾವಿನ ಸಂಖ್ಯೆ ಹೆಚ್ಚಾಯಿತು ಎಂದು ವಿಶ್ಲೇಷಣೆ ಮಾಡಲಾಗಿದೆ.
ನೈಜೀರಿಯಾ ಭಾಗದಲ್ಲಿ ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಜನರು ಹೆಚ್ಚಾಗಿ ಜಲ ಸಾರಿಗೆಯನ್ನು ಬಳಸುತ್ತಿದ್ದು, ಹೀಗಾಗಿ ಅಲ್ಲಿ ಬೋಟ್ ಅಪಘಾತಗಳು ಸಾಮಾನ್ಯವಾಗುತ್ತಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!