ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಾಧು ಸಂತರು, ಹಿಂದುಗಳಿಗೆ ರಕ್ಷಣೆ ಇಲ್ಲ: ಶಾಸಕ ಸುನಿಲ್ ಕುಮಾರ್ ಆಕ್ರೋಶ

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಾಧು ಸಂತರು ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರದ ನಿಲುವಿನ ವಿರುದ್ಧ ಮಾತನಾಡುವವರ ಮೇಲೆ ಕೇಸ್ ದಾಖಲಾಗುತ್ತೆ. ಚಂದ್ರಶೇಖರ ಸ್ವಾಮೀಜಿ ಭಾಷಣದಲ್ಲಿ ಹೇಳಿದ್ದ ತುಣುಕು ಇಟ್ಟುಕೊಂಡು ಕೇಸ್ ಹಾಕಲಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕೇಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ತನ್ನ ನೆಲುವಿನಿಂದ ಹೊರಬಂದು ಸಾಧು ಸಂತರಿಗೆ ಗೌರವ ಕೊಡಬೇಕು ಎಂದರು.
ಆಯೋಗಗಳು ಬಂದು ನಕ್ಸಲ್ ಎನ್ಕೌಂಟರ್ ತಪ್ಪು ಅನ್ನುತ್ತದೆ. ನಕ್ಸಲ್ ಪರವಾಗಿ ಮಾತನಾಡುವವರ ಬಗ್ಗೆ ಸರ್ಕಾರ ಮೃದು ಧೋರಣೆ ತಾಳುತ್ತದೆ. ಹೇಳಿಕೆ ಕೊಟ್ಟರೆ ಹಿಂದು ಕಾರ್ಯಕರ್ತರ ಮೇಲೆ ಸುಮೋಟೋ ಕೇಸ್ ಮಾಡುತ್ತಾರೆ. ನಕ್ಸಲರು ಬಂದು ಎನ್ಕೌಂಟರ್ ತಪ್ಪು ಎಂದರೆ ಸರ್ಕಾರ ಅದನ್ನು ಪೋಷಿಸುತ್ತದೆ. ನಿಯೋಗಗಳನ್ನು ಪೊಲೀಸ್ ಭದ್ರತೆಯಲ್ಲಿ ಕರೆದುಕೊಂಡು ಹೋಗುತ್ತಾರೆ. ನಗರ ನಕ್ಸಲರು ಅಂತ ಯಾರನ್ನು ಕರೆಯುವುದು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಬಾಂಗ್ಲಾದೇಶ ಇಸ್ಕಾನ್ ಮುಖ್ಯಸ್ಥರ ಮೇಲೆ ದೌರ್ಜನ್ಯ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಇಸ್ಕಾನ್ ಬಾಂಗ್ಲಾ ವನ್ನು ಬಂದ್ ಮಾಡಲು ಹೊರಟಿದ್ದಾರೆ. ಬಾಂಗ್ಲಾದ ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಬಾಂಗ್ಲಾದ ಹಿಂದುಗಳಿಗೆ ನೈತಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಡಿಸೆಂಬರ್ 4 ಮತ್ತು 5 ರಾಜ್ಯ ವ್ಯಾಪಿ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ. ಡಿಸೆಂಬರ್ ನಾಲ್ಕರಂದು ಉಡುಪಿ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಸಾವಿರಾರು ಹಿಂದುಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಬೇಕು ಎಂದು ನಾನು ಕರೆ ಕೊಡುತ್ತೇನೆ ಎಂದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!