ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಬಿಜೆಪಿಯವರು ಉಚಿತ ಬಸ್ಸಿನಲ್ಲಿ ಹೋಗುತ್ತಾರೆ, ಬಸ್ಸಿನಿಂದಿಳಿದು ಕಾಂಗ್ರೆಸ್ಸನ್ನು ದೂರುತ್ತಾರೆ: ರಮೇಶ್ ರೈ ಸಾಂತ್ಯ

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯದ ಎಲ್ಲಾ ಜನತೆಗಾಗಿ ಐದು ಗ್ಯಾರಂಟಿಗಳನ್ನು ತಂದಿದೆ. ಇವುಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಉಚಿತವಾಗಿ ಸರಕಾರಿ ಬಸ್ಸಿನಲ್ಲಿ ತೆರಳುವ ಬಿಜೆಪಿಯವರು ಬಸ್ಸಿನಿಂದ ಇಳಿದು ಶಕ್ತಿ ಯೋಜನೆಯೇ ಸರಿಯಿಲ್ಲ ಇದರಿಂದ ಕೆಎಸ್‌ಆರ್‌ಟಿಸಿ ದಿವಾಳಿಯಾಗಲಿದೆ ಎಂದು ದೂಷಣೆ ಮಾಡುತ್ತಾರೆ, ದಿವಾಳಿಯಾಗುವ ಭಯ ಬಿಜೆಪಿಗರಿಗೆ ಇದ್ದಲ್ಲಿ ಟಿಕೆಟ್ ಪಡೆದು ಪ್ರಯಾಣಿಸಲಿ ನಮ್ಮದೇನು ಅಭ್ಯಂಥರವಿಲ್ಲ ಎಂದು ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಹೇಳಿದರು. ಕಾವಿನಲ್ಲಿ ಸೇವಾ ಸಿಂಧು ನೋಂದಣಿ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಐದು ಗ್ಯಾರಂಟಿಗಳನ್ನು ಬಡವರಿಗಾಗಿ ಕಾಂಗ್ರೆಸ್ ಜಾರಿಗೆ ತಂದಿದೆ. ಇಷ್ಟವಿದ್ದವರು ಪಡೆದುಕೊಳ್ಳಬಹುದು ಬೇಡವಾದವರು ಬಿಡಬಹುದು. ಯೋಜನೆಯ ಹೆಸರಿನಲ್ಲಿ ಬಡವರನ್ನು ಹಿಯಾಳಿಸುವ ಕೆಲಸವನ್ನು ಬಿಜೆಪಿ ನಿಲ್ಲಿಸಬೇಕು, ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ಸರಕರದ ಐದು ಗ್ಯಾರಂಟಿಯನ್ನು ಕರ್ನಾಟಕದ ಜನತೆ ಸ್ವಾಗತಿಸಿದ್ದಾರೆ. ಜನತೆಯ ಸ್ವಾಗತಕ್ಕೆ ಬಿಜೆಪಿ ಬೆಚ್ಚಿ ಬಿದ್ದಿದೆ, ಕಳೆದ ಐದು ವರ್ಷದಲ್ಲಿ ಭೃಷ್ಟ ಆಡಳಿತ ನಡೆಸಿದ ಬಿಜೆಪಿಗೆ ಈ ಬರಿ ಜನ ತಕ್ಕ ಪಾಠ ಕಲಿಸಿಯೂ ಅವರಿಗೆ ಬುದ್ದಿ ಬಂದಿಲ್ಲ ಎಂದು ಹೇಳಿದ ಅವರು ಗ್ಯಾರಂಟಿ ಯೋಜನೆ ಕಾಂಗ್ರೆಸ್ ಯೋಜನೆಯಾಗಿದೆ ನೀವು ಇಷ್ಟವಿದ್ದಲ್ಲಿ ಸ್ವೀಕರಿಸಿ ಇಲ್ಲವಾದಲ್ಲಿ ಮೌನವಾಗಿರಿ ಎಂದು ಬಿಜೆಪಿಗರಿಗೆ ಮಾತಿನ ಮೂಲಕ ತಿವಿದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!