ಜನ ಮನದ ನಾಡಿ ಮಿಡಿತ

Advertisement

ಪುಸ್ತಕ ಓದುವ ಸಂಸ್ಕೃತಿ​ ಮುಂದುವರಿಯಲಿ​: ಜಿಲ್ಲಾಧಿಕಾರಿ ​ಡಾ .ಕೆ. ವಿದ್ಯಾಕುಮಾರಿ ​

ಉಡುಪಿ: ಡಿಜಿಟಲ್​ ಮಾಧ್ಯಮಗಳಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಕೈಯಲ್ಲಿ ಪುಸ್ತಕ ಹಿಡಿದು ಓದುವಾಗ ಲಭಿಸುವ ಸಂತಸ ಮೊಬೈಲ್​ ನೋಡಿ ಓದುವಾಗ ಲಭಿಸದು. ಯುವ ಸಮುದಾಯ ಸೇರಿದಂತೆ ಎಲ್ಲ ವಯೋಮಾನದವರೂ ಸಹ ಪುಸ್ತಕ ಓದುವ ಮೂಲಕ ಸಂಸ್ಕೃತಿ ಮುಂದುವರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆಶಯ ವ್ಯಕ್ತಪಡಿಸಿದರು.

 


ಉಡುಪಿ​ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ​ಘಟಕದ ‘ಮನೆಯೇ ಗ್ರಂಥಾಲಯ’ ಅಭಿಯಾನದ 125ನೇ ಕೇಂದ್ರವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಉದ್ಘಾಟಿಸಿ ಮಾತನಾಡಿ, ಜಿಲ್ಲಾಡಳಿತದಲ್ಲಿ ಎಲ್ಲ ಇಲಾಖೆ ಇರುವುದರಿಂದ ಸದ್ಯ ಸ್ಥಳಾವಕಾಶದ ಕೊರತೆ ಇದೆ. ಮುಂದಿನ ದಿನಗಳಲ್ಲಿ ಗ್ರಂಥಾಲಯಕ್ಕಾಗಿಯೇ ಒಂದು ಕೊಠಡಿ ಮೀಸಲಿಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
​ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್​ ಎಚ್​.ಪಿ. ಸ್ವಾಗತಿಸಿ, ಪ್ರಾಸ್ತಾವಿಕ​ವಾಗಿ ಮಾತನಾಡಿ, ಘಟಕದ ಎಲ್ಲ ಉತ್ಸಾಹಿ ಪದಾಧಿಕಾರಿಗಳ ಸಹಕಾರದಲ್ಲಿ ಕನ್ನಡದ ಸೇವೆಗಾಗಿ​ ಜಿಲ್ಲಾ ಘಟಕದ ಸಹಕಾರದಿಂದ ವಿನೂತನ ಕಾರ್ಯ​ಕ್ರಮ ಆಯೋಜಿಸುತ್ತಿದ್ದೇವೆ.​ ಮಣಿಪಾಲ ರೇಡಿಯೋದಲ್ಲಿ ‘ಕಥೆ ಕೇಳೋಣ’ ಸರಣಿ, ಎಲ್ಲರೂ ಪುಸ್ತಕ ಓದುವಂತಾಗ​ ಬೇಕು ಎಂದು ‘ಮನೆಯೇ ಗ್ರಂಥಾಲಯ’ ಅಭಿಯಾನ ಕೈಗೊಂಡಿದ್ದೇವೆ. ಕನ್ನಡಕ್ಕಾಗಿ ಹಾಗೂ ಕನ್ನಡಾಂಬೆಯ ಸೇವೆಗೆ ಲಭಿಸಿದ ಅವಕಾಶದ ಸದುಪಯೋಗ ಮಾಡುತ್ತಿ​ ದ್ದೇವೆ. ಕನ್ನಡದ ಸಂಸ್ಕೃತಿ ಉಳಿಸಲು ಎಲ್ಲರೂ ಶ್ರಮಿಸೋಣ ಎಂದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಡಿಸಿ ಕಚೇರಿಯ ಗ್ರಂಥಾಲಯಕ್ಕಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿ, ಶುಭ ಕೋರಿದರು. ಅನೇಕ ಸಾಹಿತಿಗಳು ಗ್ರಂಥಾಲಯಕ್ಕೆ ತಮ್ಮ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
​ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರಿಂದ ಪುಸ್ತಕ ಸ್ವೀಕರಿಸುವ ಮೂಲಕ ‘ಮನೆಯೇ ಗ್ರಂಥಾಲಯ’ದ 125ನೇ ಕೇಂದ್ರವನ್ನು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉದ್ಘಾಟಿಸಿದರು. ​
ಈ ಸಂದರ್ಭ ದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ​ಸ್ಥಾಪಕ ಉಡುಪಿ ವಿಶ್ವನಾಥ ಶೆಣ್ಣೆ,​ ಉಡುಪಿ ನಗರ ಗ್ರಂಥಾಲಯದ ಮುಖ್ಯಸ್ಥೆ ನಳಿನಿ, ಕಸಾಪ ಘಟಕದ ಗೌರವ ಕಾರ್ಯದರ್ಶಿ ರಂಜಿನಿ ವಸಂತ್​, ಜಿಲ್ಲಾ ​ಗ್ರಂಥಾಲಯದ ಮುಖ್ಯಸ್ಥೆ ಜಯಶ್ರೀ, ಕಸಾಪ ಜಿಲ್ಲಾ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ, ಕಸಾಪ ಉಡುಪಿ ತಾಲೂಕು ಸಮಿತಿಯ ಪ್ರಚಾರ ಸಮಿತಿಯ ಕಿರಣ್ ಮಂಜನ ಬೈಲು, ಆಸ್ಟ್ರೋ ಮೋಹನ್, ​ಜಾಲತಾಣ ಸಂಚಾಲಕ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ, ಕಥೆ ಕೇಳೋಣ ಸರಣಿ ಸಂಚಾಲಕ ಸತೀಶ್ ಕೊಡವೂರು, ನಾಗರಾಜ್ ಹೆಬ್ಬಾರ್, ವಸಂತ್, ಪ್ರೊ. ಶಂಕರ್, ರಾಮಾಂಜಿ ನಮ್ಮ ಭೂಮಿ, ಶ್ರೀನಿವಾಸ ಉಪಾಧ್ಯ, ದೀಪ ಕರ್ಕಿ , ಪ್ರಭಾಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ವಂದಿಸಿದರು. ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!